Facebook Twitter Instagram
    Friday, November 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

    November 20, 2026
    Share

    ಕಲಬುರಗಿ: 40 ವರ್ಷದ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡು, ಬಳಿಕ ಆಕೆಯ ಮನೆಗೆ ನುಗ್ಗಿ ಚಾಕು ತೋರಿಸಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದಡಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಎಂಎಸ್‌ಕೆ ಮಿಲ್ ಪ್ರದೇಶದ ಗಲೀಬ್ ಕಾಲೋನಿ ನಿವಾಸಿ, ಪೊಲೀಸ್ ಕಾನ್‌ಸ್ಟೇಬಲ್ ಸೈಯದ್ ತೌಸಿಫ್ ಹುಸೇನ್ (41) ಆರೋಪಿಯಾಗಿದ್ದಾರೆ. 2023ರಲ್ಲಿ ಪೊಲೀಸ್ ಠಾಣೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯ ಮಾಡುವ ಮೂಲಕ ಮಹಿಳೆಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಎನ್ನಲಾಗಿದೆ. ತನ್ನನ್ನು ಪ್ರೀತಿಸುವಂತೆ ಪದೇಪದೇ ಒತ್ತಾಯಿಸುತ್ತಿದ್ದ ಆತ, ಇದಕ್ಕೆ ಒಪ್ಪದಿದ್ದರೆ ಕಲಬುರಗಿಯಲ್ಲಿ ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

    ಆಗಸ್ಟ್ 7ರಂದು ರಾತ್ರಿ ಮಹಿಳೆಯ ಮನೆಗೆ ಬಂದ ಆರೋಪಿ, ಆಕೆಯ ಮುಖಕ್ಕೆ ಹೊಡೆದು ಚಾಕು ತೋರಿಸಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ವೇಳೆ ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದು, ಬಳಿಕ ಬಟ್ಟೆಗಳನ್ನು ತೊಳೆಯುವಂತೆ ಸೂಚಿಸಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಮಹಿಳೆ ಹಾಗೂ ಆಕೆಯ ಕುಟುಂಬದವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಈ ಸಂಬಂಧ ನವೆಂಬರ್ 15ರಂದು ಮಹಿಳೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)-2023ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Post Views: 13

    Related Posts

    ಮಕ್ಕಳ ಮಾರಾಟ ಕಾನೂನುಬಾಹಿರ: ಮಾರುವವರಿಗೆ, ಕೊಳ್ಳುವವರಿಗೆ 5 ವರ್ಷ ಜೈಲು ಶಿಕ್ಷೆ!

    November 20, 2026

    ಮಂಗಳೂರು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರ ಬಂಧನ!! ರೂ. 8,80,000 ಮೌಲ್ಯದ 88 ಗ್ರಾಂ MDMA ಮಾದಕ ವಸ್ತು ವಶ

    November 19, 2026

    ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ!

    November 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಕ್ಕಳ ಮಾರಾಟ ಕಾನೂನುಬಾಹಿರ: ಮಾರುವವರಿಗೆ, ಕೊಳ್ಳುವವರಿಗೆ 5 ವರ್ಷ ಜೈಲು ಶಿಕ್ಷೆ!

    November 20, 2026

    ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

    November 20, 2026

    ಮಂಗಳೂರು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರ ಬಂಧನ!! ರೂ. 8,80,000 ಮೌಲ್ಯದ 88 ಗ್ರಾಂ MDMA ಮಾದಕ ವಸ್ತು ವಶ

    November 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.