Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಾಟ್ಸಾಪ್‌ನಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಬೆದರಿಕೆ ಕರೆ : ಹಣ ಸುಲಿಗೆಗೆ ಹೊಸ ತಂತ್ರ ಅನುಸರಿಸಿದ ಖದೀಮರು
    ಇತ್ತೀಚಿನ ಸುದ್ದಿ

    ಮಂಗಳೂರು: ವಾಟ್ಸಾಪ್‌ನಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಬೆದರಿಕೆ ಕರೆ : ಹಣ ಸುಲಿಗೆಗೆ ಹೊಸ ತಂತ್ರ ಅನುಸರಿಸಿದ ಖದೀಮರು

    June 12, 2024
    Share

    ಸುರತ್ಕಲ್: ಪೊಲೀಸ್ ಅಧಿಕಾರಿಗಳೆಂದು ಹೇಳಿ ವಿದ್ಯಾರ್ಥಿಗಳ ಹೆತ್ತವರಿಗೆಗೆ ಕರೆ ಮಾಡಿ ಹಣ ಪೀಕಿಸುವ ತಂಡದಿಂದ ಸುರತ್ಕಲ್‌ನಲ್ಲಿ ಹಲವರಿಗೆ ಕರೆ ಬಂದಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಿಮ್ಮ ಮಕ್ಕಳು (ಮಗ) ಸಿಕ್ಕಿ ಹಾಕಿಕೊಂಡಿದ್ದಾರೆ. ಅವರನ್ನು ಬಿಡುಗಡೆ ಮಾಡ ಬೇಕಾದರೆ 5 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸುರತ್ಕಲ್‌ನ ವಿದ್ಯಾರ್ಥಿಗಳ ಕೆಲವು ಪೋಷಕರಿಗೆ ಈ ಕರೆ ಬಂದಿದ್ದು ಕೂಡಲೇ ಪೋಷಕರು ಕಾಲೇಜಿಗೆ ಕರೆ ಮಾಡಿ ತಮ್ಮ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಆ ಸಂದರ್ಭ ವಿದ್ಯಾರ್ಥಿಗಳು ಕಾಲೇಜಿನಲ್ಲೇ ಇದ್ದ ಕಾರಣ. ಇದು ನಕಲಿ ಕರೆ ಎಂದು ಮನದಟ್ಟಾಗಿದೆ. ಈ ರೀತಿ ಸುರತ್ಕಲ್‌ನಲ್ಲಿ ಮೂರು ನಾಲ್ಕು ಜನರಿಗೆ ಕರೆ ಬಂದಿದೆ ಎನ್ನಲಾಗಿದೆ. 923354533015 ನಂಬರ್‌ನಿಂದ ಕರೆ ಬಂದಿದ್ದು ಟ್ರೂ ಕಾಲರ್‌ನಲ್ಲಿ ಚೆಕ್ ಮಾಡುವಾಗ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರ ಫೋಟೋ ಇದರಲ್ಲಿ ಇದೆ. ಈ ಬಗ್ಗೆ ಅಧಿಕೃತವಾಗಿ ದೂರು ದಾಖಲಾಗದಿದ್ದರೂ ಸಾರ್ವಜನಿಕರು ಜಾಗೃತರಾಗಬೇಕಾಗಿದೆ. ನಕಲಿ ಅಧಿಕಾರಿಗಳು ಕರೆ ಮಾಡಿ ಬೆದರಿಸಿರುವ ಬಗ್ಗೆ ಕೆಲವರು ದೂರಿದ್ದಾರೆ. ಪ್ರಕರಣ ದಾಖಲಾಗಿಲ್ಲ ಸೆನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ರೀತಿಯ ಕರೆಗಳಿಂದ ಯಾರೂ ಆತಂಕಗೊಳ್ಳಬೇಕಿಲ್ಲ. ಇದು ನಕಲಿ ಕರೆ ಇಂತಹ ಕರೆ ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಹೇಳಿದ್ದಾರೆ.

    Post Views: 214

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.