Facebook Twitter Instagram
    Saturday, May 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಭರತ್‌ಗೆ ಗಡಿಪಾರು ಶಿಕ್ಷೆ
    ಇತ್ತೀಚಿನ ಸುದ್ದಿ

    ಅಕ್ರಮ ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಭರತ್‌ಗೆ ಗಡಿಪಾರು ಶಿಕ್ಷೆ

    May 16, 2026
    Share

    ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ನಿವಾಸಿ ಭರತ್‌ ಜಯರಾಮ್‌ ದಾಸ (34) ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ.

    ಆರೋಪಿ ಭರತ್ ವಿರುದ್ಧ ಈಗಾಗಲೇ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು ಮೂರು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿದ್ದು, ಉಳಿದ ಎರಡು ಪ್ರಕರಣಗಳು ತನಿಖಾ ಹಂತದಲ್ಲಿವೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 14ರಂದು ಎಸ್‌ಪಿ ಅವರು ಈ ಆದೇಶ ಜಾರಿಗೊಳಿಸಿದ್ದಾರೆ. ಗಡಿಪಾರಾದ ಆರೋಪಿಯನ್ನು ಬೆಂಗಳೂರು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    Post Views: 8

    karnataka PoliceInvestigation

    Related Posts

    ಪೊಲೀಸ್ ಸಿಬ್ಬಂದಿಯ ಮನೆಯಲ್ಲೇ ಕಳ್ಳತನ: ಲಕ್ಷಾಂತರ ಮೌಲ್ಯದ ಆಭರಣ ಕಳವು

    May 16, 2026

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಕರು ಹಾಗೂ ಕಾರು ವಶ

    May 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.