ಶಿವಮೊಗ್ಗ:ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾನ್ಸ್ಟೇಬಲ್ಗಳನ್ನು ಅಮಾನತ್ತು ಮಾಡಿ ಶಿವಮೊಗ್ಗ ಗ್ರಾಮಾಂತರ ವೃತ್ತ ನಿರೀಕ್ಷಕ ಅಭಯ ಪ್ರಕಾಶ್ ಆದೇಶಿಸಿದ್ದಾರೆ. ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ವರದಿ ಆಧರಿಸಿ ಕಾಶಿನಾಥ್, ರಂಗನಾಥ, ಶಿವರಾಜ್ ಅಮಾನತುಗೊಳಿಸಲಾಗಿದೆ.
ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 60 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ . ಮುಂಜಾಗ್ರತಾ ಕ್ರಮವಾಗಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.ವಾಹನಗಳನ್ನು ತಪಾಸಣೆ ಮಾಡಲಾಯಿತು.
ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ದುಷ್ಕರ್ಮಿಗಳಿಂದ ಕಲ್ಲೆಸೆತ ಉಂಟಾಗಿದ್ದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಗುಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮನಿ ಆದೇಶಿಸಿದ್ದರು. ಯಾರೋ ಕಿಡಿಗೇಡಿಗಳು ಮನೆಗಳು ಮತ್ತು ಪೊಲಿಸರ ಮೇಲೆ ಕಲ್ಲು ಎಸೆದಿದ್ದರು.ಇದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಶಾಂತಿನಗರದಲ್ಲಿ ಲಘು ಲಾಠಿಚಾರ್ಜ್ ಮಾಡಿದ ವೇಳೆ ಕಿಡಿಗೇಡಿಗಳಿಂದ ಪೊಲೀಸರ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ.