Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್‌ ಮಧ್ಯಂತರ ತಡೆ- ವಿಚಾರಣೆ  ಆ.8 ಕ್ಕೆ ಮುಂದೂಡಿದ ಕೋರ್ಟ್
    ಇತ್ತೀಚಿನ ಸುದ್ದಿ

    ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್‌ ಮಧ್ಯಂತರ ತಡೆ- ವಿಚಾರಣೆ  ಆ.8 ಕ್ಕೆ ಮುಂದೂಡಿದ ಕೋರ್ಟ್

    October 2, 2025
    Share

    ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

    ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

    ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರ ವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

    ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿರುವ ಮಹೇಶ್‌ ಶೆಟ್ಟಿ ತಿಮರೋಡಿ, ಅರ್ಜಿ ಇತ್ಯರ್ಥವಾಗುವವರೆಗೆ ಆದೇಶ ಜಾರಿಗೆ ತಡೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.

    ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ನಡುವೆ ಶಸ್ತ್ರಾಸ್ತ್ರ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ. ಬಂಧನದ ಭೀತಿಯಲ್ಲಿರುವ ತಿಮರೋಡಿ ಈಗಾಗಲೇ ತಲೆಮರೆಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಿಂದ ಮೂರು ಬಾರಿ ನೋಟಿಸ್‌ ಜಾರಿಯಾದರೂ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ.

    Post Views: 153

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.