Facebook Twitter Instagram
    Saturday, November 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಅರೆಸ್ಟ್

    November 14, 2026
    Share

    ಸುಬ್ರಹ್ಮಣ್ಯ: 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

    2000ರ ಸೆ.10ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುತ್ತಿಗಾರು ಎಂಬಲ್ಲಿ ಕೆಲಸದ ವಿಚಾರವಾಗಿ ಕೇರಳ ಮೂಲದ ಜೊಯ್, ಶೆಲ್ಟನ್ ಮತ್ತು ಟೋಮಿ ಅಲಿಯಾಸ್
    ಥಾಮಸ್ ಎಂಬವರ ನಡುವೆ ಜಗಳ ನಡೆದಿತ್ತು. ಈ ವೇಳೆ ಜೊಯ್ ಎಂಬಾತನಿಗೆ ಟೋಮಿ ಚೂರಿಯಿಂದ ಇರಿದು ಕೊಲೆ ಮಾಡಿದ್ದ ಎನ್ನಲಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 37/2000ರಂತೆ ಐಪಿಸಿ ಕಲಂ 302 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ
    ಆರೋಪಿಯಾಗಿದ್ದ ಕೇರಳದ ತ್ರಿಶೂರ್ ನಿವಾಸಿ ಟೋಮಿ ಅಲಿಯಾಸ್ ಥಾಮಸ್ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ.

    ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ನ.12ರಂದು ಸುಬ್ರಹ್ಮಣ್ಯ ಠಾಣೆಯ ಎಎಸ್‌ಐ ಸ್ಕರೀಯಾ, ಸುಳ್ಯ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್
    ಹರೀಶ್ ಹಾಗೂ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಆದ್ರಾಂ ಅವರ ತಂಡ ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

    ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

    Post Views: 10

    Related Posts

    10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026

    ಕಡಬ: ಪಿಕಪ್-ಕಾರು ಡಿಕ್ಕಿ!! ಓರ್ವ ಸಾವು, ಮತ್ತೋರ್ವ ಗಂಭೀರ

    November 14, 2026

    ಮಂಗಳೂರು: ಪಣಂಬೂರು ಬೀಚ್ ಬಳಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರು ಪೊಲೀಸ್ ವಶಕ್ಕೆ

    November 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026

    26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಅರೆಸ್ಟ್

    November 14, 2026

    ಕಡಬ: ಪಿಕಪ್-ಕಾರು ಡಿಕ್ಕಿ!! ಓರ್ವ ಸಾವು, ಮತ್ತೋರ್ವ ಗಂಭೀರ

    November 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.