Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ಹೇಳಿ 1.71 ಕೋ.ರೂ ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ಹೇಳಿ 1.71 ಕೋ.ರೂ ವಂಚನೆ

    November 22, 2024
    Share

    ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು ಕಾನೂನು ಬಾಹಿರ ಚಟುವಟಿಕೆ ನಡೆದಿವೆ. ಮಾರ್ಕೆಟಿಂಗ್ ನೆಪದಲ್ಲಿ ಆ ಮೊಬೈಲ್ ನಂಬರ್‌ನಿಂದ ಕರೆ ಮಾಡಿ ಕಿರುಕುಳ ನೀಡುತ್ತಿರುವ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಕೂಡಲೇ ಅಂಧೇರಿ ಪೂರ್ವ ಠಾಣೆಯನ್ನು ಸಂಪರ್ಕಿಸಬೇಕು. ಇಲ್ಲವಾದಲ್ಲಿ ನಿಮ್ಮ ಮೊಬೈಲ್ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂದು ಎಚ್ಚರಿಸಿದ್ದ.

    ಬಳಿಕ ದೂರುದಾರರು ಅಪರಿಚತ ವ್ಯಕ್ತಿ ಪ್ರದೀಪ್ ಸಾವಂತ್ ಎಂಬಾತನಲ್ಲಿ ಮಾತನಾಡಿದ್ದು, ನರೇಶ್ ಗೋಯೆಲ್ ವಂಚನೆ ಪ್ರಕರಣವನ್ನು ಒಳಗೊಂಡಿರುವ ಮನಿ ಲ್ಯಾಂಡರಿಂಗ್ ಯೋಜನೆಯಲ್ಲಿ ಭಾಗಿಯಾಗಿರುವುದರಿಂದ ಇನ್ನೊಂದು ಎಫ್‌ಐಆರ್ ದಾಖಲಾಗಿದೆ. ಅಂಧೇರಿಯ ಬ್ಯಾಂಕ್‌ನ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಅದಕ್ಕೆ ಐಡೆಂಟಿಟಿ ಬಳಸಿ ಸಿಮ್ ಖರೀದಿಸಲಾಗಿದೆ. ಹೀಗಾಗಿ ನಿಮ್ಮನ್ನು ಬಂಧಿಸಲಾಗುತ್ತದೆ ಎಂದು ಹೇಳಿದ್ದ.

    ಬಳಿಕ ರಾಹುಲ್ ಕುಮಾರ್ ಎಂಬಾತ ಪೊಲೀಸ್ ಅಧಿಕಾರಿ ಮತ್ತು ಆಕಾಂಕ್ಷ ಎಂಬ ಮಹಿಳೆ ಸಿಬಿಐ ಅಧಿಕಾರಿಯೆಂದು ಹೇಳಿಕೊಂಡು ವಾಟ್ಸಾಪ್ ನಲ್ಲಿ ವೀಡಿಯೋ ಕರೆ ಮಾಡಿದ್ದಾರೆ. ಆಕಾಂಕ್ಷ ಎಂಬಾಕೆ ಸಿಬಿಐ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿ ದೂರುದಾರರ ವಾಟ್ಸಾಪ್ ನಂಬರ್‌ಗೆ ಕಳುಹಿಸಿದ್ದಳು. ಈ ಪ್ರಕರಣದಿಂದ ಹೊರಬರಬೇಕಾದರೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಳು. ಅದರಂತೆ ದೂರುದಾರರು ನ. 13ರಿಂದ 19ರ ನಡುವೆ 53 ಲಕ್ಷ ರೂ., 74 ಲಕ್ಷ ರೂ., 44 ಲಕ್ಷ ರೂ. ಹೀಗೆ ಒಟ್ಟು 1.71 ಕೋ.ರೂ. ವರ್ಗಾಯಿಸಿದ್ದರು. ಇನ್ನು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ದೂರುದಾರರು ಮೂಲತಃ ಮುಂಬೈಯವರಾಗಿದ್ದು, ಈ ಮೊದಲು ಅಮೇರಿಕದ ಐಟಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿಂದ ಮರಳಿದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿಸಿ ವಾಸವಾಗಿದ್ದರು. ಅವಿವಾಹಿತರಾಗಿರುವ ಅವರು ಒಬ್ಬರೇ ಇದ್ದರು. ಅಮೇರಿಕಾದಲ್ಲಿ ಉದ್ಯೋಗ ಮಾಡಿ ಉಳಿತಾಯ ಮಾಡಿದ ಹಣವನ್ನು ಈ ಮೂಲಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

    Post Views: 195

    Related Posts

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.