Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 56 ಪೊಲೀಸ್‌ ಸಿಬ್ಬಂದಿಯ ವರ್ಗಾವಣೆ..!!
    ಇತ್ತೀಚಿನ ಸುದ್ದಿ

    ಮಂಗಳೂರು: 56 ಪೊಲೀಸ್‌ ಸಿಬ್ಬಂದಿಯ ವರ್ಗಾವಣೆ..!!

    June 19, 2025
    Share

    ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಬಜ್ಪೆ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ರಶೀದ್ ಸೇರಿ ಹಲವು ಪೊಲೀಸರನ್ನು ಮಂಗಳೂರು ಕಮಿಷನರೇಟ್‌ ವಲಯ ವರ್ಗಾಯಿಸಿದೆ. ಬಜ್ಪೆ ಠಾಣೆ ಹೆಡ್‌ಕಾನ್ಸ್‌ಟೇಬಲ್ ರಶೀದ್​ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

    ಸುಹಾಸ್‌ ಶೆಟ್ಟಿ ಹತ್ಯೆಗೆ ರಶೀದ್‌ ಪರೋಕ್ಷವಾಗಿ ನೆರವು ನೀಡಿದ್ದಾರೆಂದು ಕೆಲವು ಹಿಂದು ಮುಖಂಡರು ಮತ್ತು ಬಿಜೆಪಿ ನಾಯಕರು ನೇರವಾಗಿ ಆರೋಪಿಸಿದ್ದರು. ಸೋಷಿಯಲ್‌ ಮೀಡಿಯಾಗಳಲ್ಲಿ ಕೂಡ ರಶೀದ್‌ ಪಾತ್ರದ ಕುರಿತು ಬಹಳ ಚರ್ಚೆಯಾಗಿತ್ತು. ಈ ಆರೋಪಗಳನ್ನೆಲ್ಲ ನಿರಾಕರಿಸಿದ್ದ ರಶೀದ್‌ ತನ್ನ ವಿರುದ್ಧ ಆರೋಪ ಮಾಡಿದವರ ವಿರುದ್ಧ ಕೇಸ್‌ ಕೂಡ ದಾಖಲಿಸಿದ್ದಾರೆ.

    ಒಟ್ಟಾರೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೋಮು ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರಿ ಸರ್ಜರಿ ನಡೆಯುತ್ತಿದ್ದು, ಅನೇಕ ಪೊಲೀಸ್‌ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

    ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೋಮ ಹಿಂಸಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಬದಲಾವಣೆ ಮಾಡಬೇಕು ಎಂಬ ಅಗ್ರಹ ವ್ಯಕ್ತವಾಗಿತ್ತು.ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವರು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದರು. ಅದಾದ ನಂತರ ಕರಾವಳಿಯಲ್ಲಿ ಕೋಮು ಹಿಂಸಾಚಾರ ತಡೆಯುವುದಕ್ಕಾಗಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ.

    Post Views: 167

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.