Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ಆರು ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಕರ್ನಾಟಕ ಹೈಕೋರ್ಟ್ ಆದೇಶ
    ಇತ್ತೀಚಿನ ಸುದ್ದಿ

    ರಾಜ್ಯದ ಆರು ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಕರ್ನಾಟಕ ಹೈಕೋರ್ಟ್ ಆದೇಶ

    December 29, 2024
    Share

    ರಾಜ್ಯದ ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

    ಈ ಕುರಿತಂತೆ ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಕೆ. ಎಸ್. ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.

    ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯ ಮಂಡಳಿಯ ಮುಖ್ಯಸ್ಥರಾಗಿದ್ದ ನ್ಯಾಯಮೂರ್ತಿ ಎಸ್ ಮಹಾಲಕ್ಷ್ಮಿ ನೇರಳೆ ಅವರನ್ನು ರಾಜ್ಯ ಸರ್ಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

    ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ ಸದಸ್ಯರಾಗಿದ್ದ ನ್ಯಾಯಮೂರ್ತಿ ನಂದಕುಮಾರ್ ಬಿ. ಅವರನ್ನು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಮುಖ್ಯಸ್ಥರನ್ನಾಗಿ ವರ್ಗಾಯಿಸಲಾಗಿದೆ.

    ಹಾಸನ ಜಿಲ್ಲಾ ಪ್ರಧಾನ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಉಷಾ ರಾಣಿ ಅವರನ್ನು ಮೈಸೂರಿನ ಜಿಲ್ಲಾ ಪ್ರಧಾನ ನ್ಯಾಯಾಧೀಶರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿದ್ದ ನ್ಯಾಯಮೂರ್ತಿ ಎಚ್ ಆರ್ ರಾಧಾ ಅವರನ್ನು ಕರ್ನಾಟಕ ನ್ಯಾಯಾಂಗ ಅಕಾಡೆಮಿ ನಿರ್ದೇಶಕರ ಹುದ್ದೆಗೆ ವರ್ಗಾಯಿಸಲಾಗಿದೆ.

    ಬೆಂಗಳೂರಿನ 53ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾಗಿದ್ದ ಎಸ್. ಗೋಪಾಲಪ್ಪ ಅವರನ್ನು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ತನಿಖಾ ವಿಭಾಗದ ಹೆಚ್ಚುವರಿ ರಿಜಿಸ್ಟ್ರಾರ್ ಆಗಿದ್ದ ನ್ಯಾಯಮೂರ್ತಿ ಹೇಮಾವತಿ ಅವರನ್ನು ಹಾಸನ ಜಿಲ್ಲಾ ಪ್ರಧಾನ ನ್ಯಾಯಾಧೀಶರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

    ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ

    Post Views: 288

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.