Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಜಾಬ್​ ವಿವಾದ: ಸುಪ್ರೀಂ ಕೋರ್ಟ್​ ಪೀಠದಿಂದ ಭಿನ್ನ ತೀರ್ಪು-ವಿಸ್ತೃತ ಪೀಠಕ್ಕೆ ವರ್ಗಾವಣೆ
    ಇತ್ತೀಚಿನ ಸುದ್ದಿ

    ಹಿಜಾಬ್​ ವಿವಾದ: ಸುಪ್ರೀಂ ಕೋರ್ಟ್​ ಪೀಠದಿಂದ ಭಿನ್ನ ತೀರ್ಪು-ವಿಸ್ತೃತ ಪೀಠಕ್ಕೆ ವರ್ಗಾವಣೆ

    October 13, 2022
    Share

    ನವದೆಹಲಿ: ಕರ್ನಾಟಕದ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್​ ನಿಷೇಧಿಸಿ ಹೈಕೋರ್ಟ್​ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟಿಸಿದೆ. ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಹೊರಬಿದ್ದಿದೆ. ಹೀಗಾಗಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಅವರ ಪೀಠದಿಂದ ಅಂತಿಮ ತೀರ್ಪು ಹೊರಬೀಳಲಿದೆ.

    ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು, ಮೇಲ್ಮನವಿ ಅರ್ಜಿಯ ವಜಾ ಪರ ತೀರ್ಪು ನೀಡಿದ್ದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್​ ಆದೇಶವನ್ನು ರದ್ದು ಮಾಡುವ ಪರವಾಗಿ ತೀರ್ಪು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರ ಮುಂದೆ ಬರಲಿದೆ. ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ಅಲ್ಲಿಯವರೆಗೆ ಹಿಜಾಬ್​ ವಿಚಾರದಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ.

    ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಬ್ಯಾನ್ ಕುರಿತ ಕರ್ನಾಟಕ ಹೈಕೋಟ್​​ನ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ವಜಾಗೊಳಿಗೊಳಿಸಿ ತೀರ್ಪು ನೀಡಿದರು. ಇನ್ನು ನ್ಯಾಯಮೂರ್ತಿ ಧುಲಿಯಾ ಅವರು, ಅಗತ್ಯ ಧಾರ್ಮಿಕ ಆಚರಣೆ ಕುರಿತು ವಿವಾದದ ಎಬ್ಬಿಸುವ ಅಗತ್ಯ ಇರಲಿಲ್ಲ ಎಂದು ಹೈಕೋರ್ಟ್ ಆದೇಶದ ವಿರುದ್ಧ ಅಭಿಪ್ರಾಯಪಟ್ಟಿದ್ದಾರೆ.

    ಸೆಪ್ಟೆಂಬರ್ 22ರಂದು ಪ್ರಕರಣದ ಕೊನೆಯ ದಿನದ ವಿಚಾರಣೆ ನಡೆದು, ವಾದ – ಪ್ರತಿವಾದ ಪೂರ್ಣಗೊಂಡ ಬಳಿಕ ಸುಪ್ರೀಂ ಕೋರ್ಟ್​ನ ದ್ವಿಸದಸ್ಯ ಪೀಠ ತನ್ನ ತೀರ್ಪು ಇಂದಿಗೆ ಕಾಯ್ದಿರಿಸಿತ್ತು.

    ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ಕರ್ನಾಟಕ ಹೈಕೋರ್ಟ್​ ನೀಡಿದ ತೀರ್ಪನ್ನು ತಡೆ ಹಿಡಿಯುವಂತೆ ಕೋರಲಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದಿದ್ದರೆ ಅವರು ಶಾಲೆಗೆ ತೆರಳದೇ ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಹೀಗಾಗಿ ಶಾಲೆಯಲ್ಲೂ ಹಿಜಾಬ್​ ಧರಿಸಲು ಅವಕಾಶ ನೀಡಬೇಕು ಎಂದು ಫಿರ್ಯಾದುದಾರರ ಪರ ವಕೀಲರು ವಾದ ಮಂಡಿಸಿದ್ದರು. ಇದಲ್ಲದೇ ಈ ಬಿಕ್ಕಟ್ಟನ್ನು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು ಎಂದು ವಾದಿಸಿದ್ದರು

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.