Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕ ಅಮಾನತು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕ ಅಮಾನತು

    February 13, 2026
    Share

    ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಅಲ್ಲದೇ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.

    ಈ ಬಗ್ಗೆ ಮಾಧ್ಯಮಗಳ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಘಟನೆಯ ಬಗ್ಗೆ ಬಳಂಜ ನಿವಾಸಿ ಧರಣೇಂದ್ರ ಎಂಬವರು ನೀಡಿದ ದೂರಿನಂತೆ ಪಿಕಪ್ ವಾಹನ ಚಾಲಕ ನವೀನ್, ಟಿಪ್ಪರ್ ಚಾಲಕ ಪ್ರವೀಣ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 108

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.