Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾವನ ಮುಂದೆಯೇ ಪತ್ನಿಗೆ ತ್ರಿಪಲ್ ತಲಾಖ್ – ಪತಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಮಾವನ ಮುಂದೆಯೇ ಪತ್ನಿಗೆ ತ್ರಿಪಲ್ ತಲಾಖ್ – ಪತಿ ಅರೆಸ್ಟ್

    November 23, 2024
    Share

    ಮಂಗಳೂರು: ಮಾನಸಿಕ ಕಿರುಕುಳ ನೀಡಿ ದೈಹಿಕವಾಗಿ ಹಲ್ಲೆ ನಡೆಸಿ ಪತ್ನಿಗೆ ತ್ರಿಪಲ್ ತಲಾಖ್ ನೀಡಿದ ಆರೋಪಿ ಪತಿಯನ್ನು ಮಂಗಳೂರಿನ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಉಳ್ಳಾಲ ಸಮ್ಮರ್ ಸ್ಯಾಂಡ್ ಹತ್ತಿರ ನಿವಾಸಿ ಮಹಮ್ಮದ್ ದಿಲ್ಫಾಜ್ ತ್ರಿವಳಿ ತಲಾಖ್ ನೀಡಿದ ಆರೋಪಿ. ಈತ ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಹೀನಾ ಫಾತಿಮಾ ಎಂಬಾಕೆಯನ್ನು 2019ರಲ್ಲಿ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮದುವೆಯ ಸಂದರ್ಭ ಹೀನಾ ಫಾತಿಮಾ ಮನೆಯವರು ಆಕೆಗೆ 22 ಪವನ್ ಚಿನ್ನ ಹಾಕಿದ್ದು, ಮೊಹಮ್ಮದ್ ದಿಲ್ಫಾಜ್‌ಗೆ ವಾಚ್ ಖರೀದಿಸಲು 50,000 ರೂ. ನೀಡಿದ್ದರು. ಮದುವೆಯಾದ ಬಳಿಕ ಮೊಹಮ್ಮದ್ ದಿಲ್ಫಾಜ್ ಪತ್ನಿಯೊಂದಿಗೆ ಸಂತೋಷದಿಂದಿದ್ದು, ಬಳಿಕ ಬೇರೆ ಅನ್ಯ ಮಹಿಳೆಯರೊಂದಿಗೆ ಅನೈತಿಕ ಸಂಬಂಧ ಹೊಂದಲು ಆರಂಭಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಈ ಬಗ್ಗೆ, ಪತ್ನಿ ವಿಚಾರಿಸಿದಾಗ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ. ಪರಿಣಾಮ ಹೀನಾ ಫಾತಿಮಾ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಕುಟುಂಬದ ಹಿರಿಯರು ಪಂಚಾಯಿತಿ ನಡೆಸಿ ಮೊಹಮ್ಮದ್ ದಿಲ್ಫಾಜ್‌ಗೆ ಬುದ್ಧಿ ಮಾತನ್ನು ಹೇಳಿದ್ದರು‌. ಆದರೂ ತನ್ನ ಚಾಳಿಯನ್ನು ಮುಂದುವರೆಸಿದ್ದಾನೆ‌. ನವೆಂಬರ್ 8ರಂದು ಈ ಬಗ್ಗೆ ಹೀನ ಫಾತಿಮಾ ತಂದೆ ಸಬೀಲ್ ಅಹಮ್ಮದ್ ಅವರು ಮೊಹಮ್ಮದ್ ದಿಲ್ಫಾಜ್‌ನಲ್ಲಿ ವಿಚಾರಿಸಿದ್ದಕ್ಕೆ ಆತ ಪತ್ನಿಗೆ ಹಲ್ಲೆ ನಡೆಸಿದ್ದಲ್ಲದೆ, ಪತ್ನಿಯ ತಂದೆಯನ್ನು ಮನೆಗೆ ಕರೆದು ಅವರ ಎದುರಿನಲ್ಲಿಯೇ ಪತ್ನಿ ಹೀನಾ ಫಾತಿಮಾಗೆ ಮೂರು ಬಾರಿ ತಲಾಖ್ ಹೇಳಿದ್ದಾನೆ‌.

    Post Views: 225

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.