Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಿಂದ ನಗ-ನಗದು ಕಳವು..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಿಂದ ನಗ-ನಗದು ಕಳವು..!

    November 5, 2024
    Share

    ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್‌‌ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಶ್ರೀಮಹಾಲಿಂಗೇಶ್ವರ ತುಂಬೆಯಲ್ಲಿರುವ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ.

    ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ. ಇದರ ಜೊತೆ ಗೊದ್ರೇಜ್, ಕ್ಯಾಶ್‌‌ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ.

    ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಸೋಮವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ದೇವಸ್ಥಾನವೊಂದರ ಕಳವು ನಡೆಯುವುದನ್ನು ಸ್ವತಃ ಅಲ್ಲಿನ ಅರ್ಚಕರು ಸಿ.ಸಿ.ಕ್ಯಾಮರಾದ ಮೂಲಕ ನೋಡಿದ್ದಾರೆ ಆದರೂ ಕಳ್ಳರ ಬಳಿ ಮಾರಕಾಸ್ತ್ರಗಳು ಇರುವುದು ಕಂಡು ಬಂದಿದ್ದರಿಂದ ತಡೆಯಲು ಅಸಾಧ್ಯವಾಗಿತ್ತು. ಮತ್ತು ಈ ಕಳ್ಳತನದ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು ಸುದ್ದಿಯಾಗಿತ್ತು. ಅಂತಹ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕಳ್ಳರು ಯೋಚಿಸಿಯಾಗಿರಬೇಕು, ಇಲ್ಲಿನ ಸಿ.ಸಿ.ಕ್ಯಾಮರಾದ ಪೂಟೇಜ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಇಂದು ಬೆಳಿಗ್ಗೆ (ನ.4ರಂದು) ದೇವಸ್ಥಾನದ ಸಿಬ್ಬಂದಿಯೊರ್ವರು 6. ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.

    ಇತ್ತೀಚೆಗೆ ಈ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆದಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.

    Post Views: 150

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.