Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಟರ್ಕಿ ಭೂಕಂಪ : 7900 ದಾಟಿದ ಸಾವಿನ ಸಂಖ್ಯೆ
    ಅಂತಾರಾಷ್ಟ್ರೀಯ

    ಟರ್ಕಿ ಭೂಕಂಪ : 7900 ದಾಟಿದ ಸಾವಿನ ಸಂಖ್ಯೆ

    February 8, 2023
    Share

    ಟರ್ಕಿ : ಸತತ ಭೂಕಂಪನದಿಂದ ಟರ್ಕಿ ಹಾಗೂ ಸಿರಿಯಾ ದೇಶಗಳು ಸಂಪೂರ್ಣ ನಾಶವಾಗಿದ್ದು, ಭೂಕಂಪನದಿಂದಾಗಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ ಮತ್ತೆ ಮತ್ತೆ ಭೂಕಂಪನ ಉಂಟಾಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ.

    ಈ ನಡುವೆ ಸೋಮವಾರದ ಭೂಕಂಪದಿಂದ ದೇಶ ಚೇತರಿಸಿಕೊಳ್ಳುವ ಮೊದಲೇ ಮಂಗಳವಾರ ಮತ್ತೆ ರಿಕ್ಟರ್ ಮಾಪಕದಲ್ಲಿ 7.6 ಮತ್ತು 6 ತೀವ್ರತೆ ಹೊಂದಿದ್ದ ಎರಡು ಭೂಕಂಪ ಸಂಭವಿಸಿದ್ದು, ಪತನದ ಅಂಚಿನಲ್ಲಿದ್ದ ಮತ್ತಷ್ಟು ಕಟ್ಟಡಗಳನ್ನು ನೆಲಸಮ ಮಾಡಿವೆ.
    ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪನ ಪರಿಣಾಮ ಮೃತರ ಸಂಖ್ಯೆ ಕನಿಷ್ಠ 7,926ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಟರ್ಕಿಯಲ್ಲಿ ಕನಿಷ್ಠ 5,894 ಜನರು ಸಾವನ್ನಪ್ಪಿದ್ದು, 34,810 ಜನರು ಗಾಯಗೊಂಡಿದ್ದಾರೆ ಎಂದು ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ಹೇಳಿದ್ದಾರೆ. ಟರ್ಕಿ ಮತ್ತು ಸಿರಿಯಾದ ದುರಂತವು 5,600ಕ್ಕೂ ಹೆಚ್ಚು ಕಟ್ಟಡಗಳು ನೆಲಕಚ್ಚುವಂತೆ ಮಾಡಿದೆ. ಅನೇಕ ನಗರಗಳಲ್ಲಿ ಕಟ್ಟಡಗಳು ನಾಮಾವಶೇಷವಾಗಿವೆ.

    ದಕ್ಷಿಣ ಟರ್ಕಿ ಮತ್ತು ಉತ್ತರ ಸಿರಿಯಾ ನಡುವಿನ 250 ಮೈಲು ಉದ್ದದ ಪ್ರದೇಶದಲ್ಲಿ ಭೂಕಂಪದಿಂದ ಭಾರೀ ಹಾನಿಯಾಗಿದ್ದು, ಅಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಮತ್ತಷ್ಟು ವಿಚಾರಗಳು ಬಹಿರಂಗಗೊಳ್ಳಲಿದೆ. ಅದರಲ್ಲೂ ಎರಡು ದೇಶಗಳಲ್ಲಿನ ಕೆಲ ಪ್ರದೇಶಗಳು ಇನ್ನೂ ಯಾರ ಸಂಪರ್ಕಕ್ಕೂ ಬಂದಿಲ್ಲ. ಇದು ಬೇರೆಲ್ಲ ವಿಷಯಗಳಿಗಿಂದ ಮತ್ತಷ್ಟು ಆತಂಕಕ್ಕೆ ಗುರಿ ಮಾಡಿದೆ. ಇದರ ಜೊತೆಗೆ ಹಿಮಪಾತ, ಭಾರೀ ಶೀತ ವಾತಾವರಣ ರಕ್ಷಣಾ ಕಾರ್ಯಾಚರಣೆಗೆ ಹಿನ್ನಡೆಯನ್ನುಂಟು ಮಾಡುತ್ತಿದೆ ಎಂದು ತಿಳಿದುಬಂದಿದೆ.

    ಸಾವಿನ ಸಂಖ್ಯೆ 20,000 ದಾಟುವ ಸಾಧ್ಯತೆಗಳಿವೆ… ಟರ್ಕಿಯೊಂದರಲ್ಲಿಯೇ ಮೃತರ ಸಂಖ್ಯೆ 5,894 ದಾಖಲಾಗಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದ್ದು, ಒಟ್ಟಾರೆ ಎರಡೂ ದೇಶಗಳಲ್ಲಿನ ಮರಣ ಪ್ರಮಾಣ 20,000 ದಾಟಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ.

    Post Views: 286

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.