Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅನುಮಾನಾಸ್ಪದ ಸಾವು ಕೇಸ್ ಗೆ ಟ್ವಿಸ್ಟ್ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯ ಕೊಂದ ಪತ್ನಿ!
    ಇತ್ತೀಚಿನ ಸುದ್ದಿ

    ಅನುಮಾನಾಸ್ಪದ ಸಾವು ಕೇಸ್ ಗೆ ಟ್ವಿಸ್ಟ್ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯ ಕೊಂದ ಪತ್ನಿ!

    April 19, 2026
    Share

    ಮೈಸೂರು : ನಿನ್ನೆ ಮೈಸೂರಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ರಸ್ಟ ಸಿಕ್ಕಿದ್ದು, ಮೃತ ಜವರಪ್ಪನನ್ನು ಹಾಕೆ ಪತ್ನಿಯೇ ಪ್ರಿಯಕರಣ ಜೊತೆಗೆ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿ ಎಂದು ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿಸಿದ್ದಾಳೆ.

    ಹೌದು ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪಾದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಜವರಪ್ಪ ಕೊಲೆಯಾದ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಮತ್ತು ಕುರ್ಣೆಗಾಲ ಗ್ರಾಮದ ಅಮೃತಾ(26)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗ್ತಿದೆ.

    ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದ್ದು, 12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ಅಮೃತಾ ತವರಿಗೆ ಹೋಗಿದ್ದಳು.ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಜವರಪ್ಪ, ಮನೆಗೆ ಹಿಂದಿರುಗಿ ಬಂದಿರಲಿಲ್ಲ.

    ಬದಲಾಗಿ ಮರುದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆ ಜವರಪ್ಪ ಸಹೋದರ ರವಿ ನೀಡಿದ್ದ ದೂರಿನ ಅನ್ವಯ ತನಿಖೆಗಿಳಿದ ಪೊಲೀಸರು ಸಾವಿನ ಹಿಂದಿನ ಸತ್ಯವನ್ನು ರಿವೀಲ್​​ ಮಾಡಿದ್ದಾರೆ. ಆರೋಪಿ ಸಿದ್ದೇಶ್​​ಗೆ ಜವರಪ್ಪ ಪತ್ನಿ ಅಮೃತಾ ಜೊತೆಗೆ ಅಕ್ರಮ ಸಂಬಂಧ ಇತ್ತು. ಹೀಗಾಗಿ ಆತ ಇದ್ದರೆ ತಮ್ಮ ಸಂಬಂಧಕ್ಕೆ ತೊಂದರೆ ಆಗುತ್ತೆ ಎಂದು ಆರೋಪಿಗಳು ಜವರಪ್ಪನ ಕೊಲೆಗೆ ಪ್ಲ್ಯಾನ್​​ ಮಾಡಿದ್ದರು. ಅದರಂತೆ ಅಮೃತಾ ಕುಮ್ಮಕ್ಕಿನಿಂದ ಆಕೆಯ ಪ್ರಿಯಕರ ಸಿದ್ದೇಶ್​​ನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

    Post Views: 110

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.