Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    August 1, 2025
    Share

    ಮಂಗಳೂರು: ನಗರದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಕಂಕನಾಡಿಯ ಅಪಾರ್ಟ್‌ಮೆಂಟ್‌ವೊಂದರ ನಿವಾಸಿ ಉಬೇದುಲ್ಲಾ ಮತ್ತು ಹೊಯಿಗೆ ಬಜಾರ್ ನಿವಾಸಿ ದಾಮೋದರ ಎಂದು ಗುರುತಿಸಲಾಗಿದೆ.

    2011ರ ಮಾರ್ಚ್ 14ರಂದು ನಗರದ ಹಂಪನಕಟ್ಟೆಯ ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಹಿಳಾ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಈ ಪೈಕಿ ಮೂವರ ವಿಚಾರಣೆಯಾಗಿದ್ದು, ಅವರು ಪ್ರಕರಣದಿಂದ ಖುಲಾಸೆಗೊಂಡಿದ್ದರು. ಆದರೆ 4ನೇ ಆರೋಪಿ ಪಿ. ದಾಮೋದರ ಎಂಬಾತನು 14 ವರ್ಷದಿಂದ ತಲೆಮರೆಸಿಕೊಂಡಿದ್ದ. ಹಾಗಾಗಿ ನ್ಯಾಯಾಲಯವು ಆತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಅದರಂತೆ ಮಹಿಳಾ ಠಾಣೆಯ ಪೊಲೀಸರು ದಾಮೋದರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಉಬೇದುಲ್ಲಾ ಎಂಬಾತನು ಹೆಚ್ಚುವರಿ ವರದಕ್ಷಿಣೆಗಾಗಿ ತನ್ನ ಹೆಂಡತಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಬಗ್ಗೆ 2018ರಲ್ಲಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಬಗ್ಗೆ ನ್ಯಾಯಾಲಯವು ಆರೋಪಿಯ ವಿರುದ್ಧ ವಾರಂಟ್ ಹೊರಡಿಸಿತ್ತು. 7 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯು ವಿದೇಶದಿಂದ ಬರುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಗಳವಾರ ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 135

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.