Facebook Twitter Instagram
    Tuesday, October 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಹೊಳೆ ನೀರಿನಲ್ಲಿ ಮೀನು ಹಿಡಿಯುತ್ತಿದ್ದಾಗ ದುರಂತ- ವಿದ್ಯುತ್ ಶಾಕ್‌ಗೆ ಇಬ್ಬರು ಬಲಿ
    ಇತ್ತೀಚಿನ ಸುದ್ದಿ

    ಸುಳ್ಯ: ಹೊಳೆ ನೀರಿನಲ್ಲಿ ಮೀನು ಹಿಡಿಯುತ್ತಿದ್ದಾಗ ದುರಂತ- ವಿದ್ಯುತ್ ಶಾಕ್‌ಗೆ ಇಬ್ಬರು ಬಲಿ

    October 13, 2026
    Share

    ಸುಳ್ಯ: ವಿದ್ಯುತ್ ಶಾಕ್ ತಗುಲಿ ಇಬ್ಬರು ಮೃತಪಟ್ಟಿದ್ದು, ಓರ್ವ ಬಾಲಕ ಗಾಯಗೊಂಡಿರುವ ಘಟನೆ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ನಡೆದಿದೆ.

    ಮೃತರನ್ನು ಸುಳ್ಯದ ಕಲ್ಮಡ್ಕ ನಿವಾಸಿ ರಮೇಶ್ ಅಲಿಯಾಸ್ ಗಣೇಶ್ (36) ಮತ್ತು ಬೆಳ್ತಂಗಡಿಯ ಗುರುವಾಯನಕೆರೆ ನಿವಾಸಿ ಭರತ್ (28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.

    ಅ.12 ರಂದು ಮೀನು ಹಿಡಿಯಲೆಂದು ಭರತ್ ಮತ್ತು ಗಣೇಶ್ ಅವರು ಇನ್ನೊಬ್ಬ ಅಪ್ರಾಪ್ತ ಬಾಲಕನೊಂದಿಗೆ ಸುಳ್ಯದ ಕಲ್ಮಡ್ಕ ಗ್ರಾಮದಲ್ಲಿನ ಹೊಳೆಕ್ಕೆರೆ ಎಂಬಲ್ಲಿಗೆ ತೆರಳಿದ್ದಾರೆ. ಈ ವೇಳೆ ಅವರು ತೋಡಿನಲ್ಲಿ ಹರಿಯುವ ನೀರಿನಲ್ಲಿ ಮೀನು ಹಿಡಿಯುತ್ತಾ ಮುಂದೆ ಸಾಗಿದ್ದು, ಅದರ ಪಕ್ಕದಲ್ಲಿನ ಮಧುಸೂದನ್ ಭಟ್ ಎಂಬವರ ತೋಟದಿಂದ ವಿದ್ಯುತ್ ಪ್ರವಹಿಸಿ ಬಿದ್ದಿದ್ದಾರೆ.

    ಇದನ್ನು ನೋಡಿದ ಜೊತೆಗಿದ್ದ ಅಪ್ರಾಪ್ತ ಬಾಲಕ ತನ್ನ ಸಂಬಂಧಿಕರಿಗೆ ಈ ವಿಷಯವನ್ನು ತಿಳಿಸಿ ಅವರನ್ನು ಕೆ.ವಿ.ಜಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ವೈದ್ಯರು ಪರೀಕ್ಷಿಸಿ ಭರತ್ ಮತ್ತು ಗಣೇಶ್ ರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಹಾಗೂ ಗಾಯಗೊಂಡ ಬಾಲಕನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿದೆ.

    ಅನಧಿಕೃತವಾಗಿ ತೋಟಕ್ಕೆ ವಿದ್ಯುತ್ ಅಳವಡಿಸಿರುವ ಮಧುಸೂದನ್ ಭಟ್ ಅವರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 59/2026 ಕಲಂ 105 ಬಿಎನ್ಎಸ್ ಮತ್ತು 135(1)(E) ಎಲೆಕ್ಟ್ರಿಸಿಟಿ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ.

    Post Views: 2

    Related Posts

    ಪುತ್ತೂರು: ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ – ₹1.31 ಕೋಟಿ ವಂಚನೆ!!

    October 13, 2026

    ಮಂಗಳೂರು: ಮೊಬೈಲ್ ಫೋನ್ ವಿವಾದದಲ್ಲಿ ಸ್ನೇಹಿತನ ಕೊಲೆ- ಆರೋಪಿಗೆ ಜೀವಾವಧಿ ಶಿಕ್ಷೆ

    October 13, 2026

    ಸ್ನೇಹಾಲಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ: ಮಾನಸಿಕ ಆರೋಗ್ಯ ಜಾಗೃತಿಗೆ ಸ್ನೇಹಾಲಯದ ಮಹತ್ವದ ಹೆಜ್ಜೆ

    October 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸುಳ್ಯ: ಹೊಳೆ ನೀರಿನಲ್ಲಿ ಮೀನು ಹಿಡಿಯುತ್ತಿದ್ದಾಗ ದುರಂತ- ವಿದ್ಯುತ್ ಶಾಕ್‌ಗೆ ಇಬ್ಬರು ಬಲಿ

    October 13, 2026

    ಪುತ್ತೂರು: ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ – ₹1.31 ಕೋಟಿ ವಂಚನೆ!!

    October 13, 2026

    ಮಂಗಳೂರು: ಮೊಬೈಲ್ ಫೋನ್ ವಿವಾದದಲ್ಲಿ ಸ್ನೇಹಿತನ ಕೊಲೆ- ಆರೋಪಿಗೆ ಜೀವಾವಧಿ ಶಿಕ್ಷೆ

    October 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.