Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    Share

    ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

    ಸೆ. 14 ರಂದು ರಾತ್ರಿ ಕೇರಳ ಕಡೆಯಿಂದ ಕನ್ಯಾನ ಕಡೆಗೆ ಲಾರಿಯಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪಿಎಸ್ಐ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನೆಲ್ಲಿಕಟ್ಟೆ ಜಂಕ್ಷನ್ ಬಳಿ ಕಾರ್ಯಾಚರಣೆ ನಡೆಸಿದ್ದಾರೆ.

    ಈ ವೇಳೆ KA-21-D-0784 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಅಥವಾ ದಾಖಲೆ ಇಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಕಂಡುಬಂದಿದ್ದು, ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ಚಾಲಕ ವೀರಕಂಭ ನಿವಾಸಿ ಮೊಹಮ್ಮದ್ ತೌಕಿರ್ (26), ಮಾಲೀಕ ಮೊಹಮ್ಮದ್ ಸಿಮ್ರಾನ್ ಹಾಗೂ ಸಹಕರಿಸಿದ ಸಜೀರ್ ಎಂಬವರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರ 193/2026, ಕಲಂ 303(2) BNS, 4(1), 4(1A), 21 MMDR Act 1957 ಮತ್ತು ಕಲಂ 3,44 KMMC Rule 1994 ರಂತೆ ಪ್ರಕರಣ ದಾಖಲಿಸಿದ್ದಾರೆ.

    ಅದೇ ದಿನ ತಡರಾತ್ರಿ ಕುದ್ದುಪದವು ಮಾರ್ಗವಾಗಿ ಕಲ್ಲಡ್ಕ-ಕಾಂಞಗಾಡ್ ಅಂತರರಾಜ್ಯ ಹೆದ್ದಾರಿಯಲ್ಲಿ KA-70-A-1926 ನಂಬರಿನ ಟಿಪ್ಪರ್ ಲಾರಿಯಲ್ಲಿ ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದುದನ್ನು ಪಿಎಸ್ಐ ರಾಮಕೃಷ್ಣ ಅವರು ಪತ್ತೆ ಮಾಡಿದ್ದಾರೆ. ಲಾರಿ ವಶಪಡಿಸಿಕೊಂಡು ಬೆಳ್ತಂಗಡಿ ಕನ್ಯಾಡಿ ನಿವಾಸಿ ಚಂದ್ರೇಶ್ (40) ವಿರುದ್ಧ ವಿಟ್ಲ ಠಾಣೆಯಲ್ಲಿ ಅಕ್ರ 194/2026, ಕಲಂ: 303(2) BNS, 4(1), 4(1A), 21 MMDR (MINES AND MINERALS REGULATION OF DEVELOPMENT) ACT 1957 ಕಲಂ. 3, 44 KARNATAKA MINOR MINERAL CONSISTENT RULE 1994 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 1

    Related Posts

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.