Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಒಂದೇ ಹುದ್ದೆಗೆ ಇಬ್ಬರ ಗುದ್ದಾಟ- ಅಕ್ಕಪಕ್ಕ ಕುರ್ಚಿ ಹಾಕಿ ಕುಳಿತ ಸರ್ಕಾರಿ ಅಧಿಕಾರಿಗಳು
    ಇತ್ತೀಚಿನ ಸುದ್ದಿ

    ಒಂದೇ ಹುದ್ದೆಗೆ ಇಬ್ಬರ ಗುದ್ದಾಟ- ಅಕ್ಕಪಕ್ಕ ಕುರ್ಚಿ ಹಾಕಿ ಕುಳಿತ ಸರ್ಕಾರಿ ಅಧಿಕಾರಿಗಳು

    November 24, 2023
    Share

    ಒಂದೇ ಸರ್ಕಾರಿ ಹುದ್ದೆಗಾಗಿ ಇಬ್ಬರು ಅಧಿಕಾರಿಗಳು ಗುದ್ದಾಟ ನಡೆಸಿ, ಇಬ್ಬರೂ ಅಧಿಕಾರಿಗಳು ಪ್ರತ್ಯೇಕ ಕುರ್ಚಿ ಹಾಕಿಕೊಂಡು ಕುಳಿತ ಘಟನೆ ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದಿದೆ.

    ನಗರದ ಹೊಸಳ್ಳಿ ಕ್ರಾಸ್ ಬಳಿಯಿರುವ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಂಗಪ್ಪ ಪೂಜಾರಿ ಹಾಗೂ ಡಿ.ರಾಜಕುಮಾರ್ ಎಂಬ ಇಬ್ಬರು ಅಧಿಕಾರಿಗಳ ಮಧ್ಯೆ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಇದರಿಂದ ಇಲಾಖೆಯ ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಿರುವ ಸಾರ್ವಜನಿಕರು ಒಂದೇ ಹುದ್ದೆಯಲ್ಲಿ ಇಬ್ಬರು ಅಧಿಕಾರಿಗಳನ್ನ ಕಂಡು ಗೊಂದಲಕ್ಕೆ ಸಿಲುಕಿದ್ದಾರೆ. ಸಂಗಪ್ಪ ಅವರು ಫೆ.1 ರಿಂದ ಅ.16ರ ವರೆಗೆ ಸಹಾಯಕ ನಿರ್ದೇಶಕರ ಹುದ್ದೆಯಲ್ಲಿ ಕೆಲಸ ಮಾಡಿದ್ದಾರೆ. ಇನ್ನೂ ರಾಜಕುಮಾರ್ ಅವರು ಇದೇ ಹುದ್ದೆಗೆ ಸರ್ಕಾರದಿಂದ ಆದೇಶ ತಂದು ಅಕ್ಟೋಬರ್ 16 ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಆದೇಶವನ್ನು ಪ್ರಶ್ನಿಸಿ ಸಂಗಪ್ಪ ಪೂಜಾರಿ ಅವರು ಅವಧಿಗೂ ಮುನ್ನವೆ ನನ್ನ ಜಾಗಕ್ಕೆ ಮತ್ತೊಬ್ಬರಿಗೆ ಆದೇಶ ಆಗಿದೆ ಎಂದು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠದ ಮೊರೆ ಹೋಗಿದ್ದರು. ಕೋರ್ಟ್ ಸಂಗಪ್ಪ ಪರ ತೀರ್ಪು ನೀಡಿ, ಹುದ್ದೆಯಲ್ಲಿ ಮುಂದೆವರಿಯುವಂತೆ ಆದೇಶ ಹೊರಡಿಸಿದೆ. ಇದೇ ವೇಳೆ ರಾಜಕುಮಾರ್ ಆಗಿರುವ ಆದೇಶವನ್ನು ಕೋರ್ಟ್ ರದ್ದು ಮಾಡಿದೆ ಎಂದು ಸಂಗಪ್ಪ ಅವರು ತಮ್ಮ ವಾದ ಮಂಡಿಸಿದ್ದಾರೆ. ನನಗೆ ಸರ್ಕಾರದಿಂದ ಆದೇಶ ಇದೆ ಎಂದು ರಾಜಕುಮಾರ್ ಅವರು ಕಚೇರಿಯಲ್ಲಿ ಕುಳಿತಿದ್ದಾರೆ.

    Post Views: 290

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.