Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಯುವಕನ ಹತ್ಯೆ – ಇಬ್ಬರಿಗೆ ಜೀವಾವಧಿ ಶಿಕ್ಷೆ
    ಕರಾವಳಿ ಸುದ್ದಿ

    ಮಂಗಳೂರು: ಯುವಕನ ಹತ್ಯೆ – ಇಬ್ಬರಿಗೆ ಜೀವಾವಧಿ ಶಿಕ್ಷೆ

    June 29, 2023
    Share

    ಮಂಗಳೂರು: ಕೊಲೆ ಪ್ರಕರಣವೊಂದರ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.

    ಮಂಗಳೂರು ತಾಲೂಕಿನ ಬಡಗ ಎಡಪದವು ನಿವಾಸಿ ರಮೇಶ್ ಶೆಟ್ಟಿಗಾರ್(41) ಮತ್ತು ನಿತ್ಯಾನಂದ (41) ಶಿಕ್ಷೆಗೊಳಗಾದ ಆರೋಪಿಗಳು. ಇವರು ಬಡಗ ಎಡಪದವಿನ ನವೀನ (28) ಎಂಬವರನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದರು.ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಪಿಗಳು 2019ರ ಮೇ 17ರಂದು ರಾತ್ರಿ 11:50ಕ್ಕೆ ಬಡಗ ಎಡಪದವು ಗ್ರಾಮದ ದೂಮ ಚಡವು ದಡ್ಡಿ ಕ್ರಾಸ್ ಎಂಬಲ್ಲಿ ನವೀನರ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದರು ಎನ್ನಲಾಗಿದೆ. ಬಳಿಕ ತಮ್ಮ ಬಟ್ಟೆ ಬರೆಗಳನ್ನು ಕಾಡಿನಲ್ಲಿ ಸುಟ್ಟು ಸಾಕ್ಷ್ಯ ನಾಶ ಮಾಡಿದ್ದರು.ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ ಐಪಿಸಿ ಕಲಂ 302ರಡಿ ಜೀವಾವಧಿ ಶಿಕ್ಷೆ, 2 ಲ.ರೂ.ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ವರ್ಷ ಶಿಕ್ಷೆ, ಕಲಂ 201ರಡಿ 7 ವರ್ಷಗಳ ಶಿಕ್ಷೆ, 1 ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕೊಲೆಯಾದ ನವೀನನ ತಾಯಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ.

    Post Views: 306

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.