Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ..!! ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ..!! ಇಬ್ಬರು ಆರೋಪಿಗಳ ಬಂಧನ

    December 2, 2025
    Share

    ಮಂಗಳೂರಿನ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

    ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಬಂಧಿತ ಆರೋಪಿಗಳು. ನ.14ರಂದು ಮಂಗಳೂರಿನ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿದ್ದರು.

    ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ.30ರಂದು ಮಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿAದ ಎರಡು ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಇವುಗಳ ಒಟ್ಟು ಮೊತ್ತ 1.23 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿ ಅಲೆಕ್ಸ್ ವಿರುದ್ದ ಕೇರಳದ ಅಲಕ್ಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಮಾಡಿರುವ ಪ್ರಕರಣ ಹಾಗೂ ಅಮಲ್ ಕೃಷ್ಣ ನ ವಿರುದ್ದ ತಲಶೇರಿ ಹಾಗೂ ಕುರಚೂಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಕಳವು ಮಾಡಿದ ಪ್ರಕರಣಗಳು ದಾಖಲಾಗಿವೆ.

    Post Views: 91

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.