Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಪುತ್ತೂರು:ರೈಲಿನಿಂದ ಬಿದ್ದ ಯುವಕ 15 ಗಂಟೆ ಬಳಿಕ ಪತ್ತೆ!
    Uncategorized

    ಪುತ್ತೂರು:ರೈಲಿನಿಂದ ಬಿದ್ದ ಯುವಕ 15 ಗಂಟೆ ಬಳಿಕ ಪತ್ತೆ!

    March 27, 2025
    Share

    ಪುತ್ತೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ.

    ಮಾ 25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ. ಇದು ತುಸು ನಿರ್ಜನ ಪ್ರದೇಶವಾಗಿದ್ದು ಇಳಿಜಾರಿನಿಂದ ಕೂಡಿದೆ. ಬಿದ್ದ ಸ್ಥಳದಿಂದ 25 ಅಡಿಗಳಷ್ಟು ಕೆಳಭಾಗಕ್ಕೆ ಜಾರಿಗೊಂಡು ಹೋಗಿದ್ದ ಯುವಕ ಅಲ್ಲಿ ಮೋರಿಯ ಪಕ್ಕ ಮಲಗಿದ ಸ್ಥಿತಿಯಲ್ಲೇ ಬಾಕಿಯಾಗಿದ್ದರು. ರಾತ್ರಿ ವೇಳೆ ಯುವಕ ರೈಲಿನಿಂದ ಬೀಳುವುದನ್ನು ಸಹ ಪ್ರಯಾಣಿಕರು ಗಮನಿಸಿದ್ದು ನೆಟ್ಟಣ ತಲುಪಿದ ವೇಳೆ ರೈಲ್ವೆ ಮಾಸ್ಟರ್ ಗಮನಕ್ಕೆ ತಂದಿದ್ದರು. ಆದರೆ ಯುವಕ ಬಿದ್ದ ಜಾಗ ಯಾವುದು ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ ಪತ್ತೆ ಕಾರ್ಯವೂ ಸಾಧ್ಯವಾಗಿರಲಿಲ್ಲ.

    ಮಾ.26ರಂದು ಸುಣ್ಣಾಜೆ ಬಳಿ ಕೊಳವೆಬಾವಿಯ ಪಂಪ್ ಎಳೆಯಲು ಹೋಗಿದ್ದ ದಿನೇಶ್ ಆಚಾರ್ಯ, ಸಂತೋಷ್ ಅಲೆಕ್ಕಾಡಿ ಪ್ರತಾಪ್ ಪರಣೆ ಮತ್ತಿತರರಿಗೆ ಮೋರಿ ಸಮೀಪ ವ್ಯಕ್ತಿ ನರಳುವುದು ಕೇಳಿಸಿತು. ತತ್‌ಕ್ಷಣ ಈ ವಿಚಾರವನ್ನು ಸಾಮಾಜಿಕ ಕಾರ್ಯಕರ್ತ ಸಚಿನ್ ಸವಣೂರು ಅವರ ಗಮನಕ್ಕೆ ತಂದರು. ಅವರು ಆಗಮಿಸಿ ಯುವಕನನ್ನು ಪತ್ತೆಹಚ್ಚಿ ಆರೈಕೆ ಮಾಡಿ ವಿಚಾರಿಸಿದಾಗ, ಆತ ಕುಮಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಗ್ಗೆ ತಿಳಿಯಿತು.

    ಬಳಿಕ ಪೊಲೀಸರ ಸೂಚನೆಯಂತೆ ಯುವಕನನ್ನು ಆಯಂಬುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಮುಖ ಹಾಗೂ ಕಾಲಿಗೆ ತೀವ್ರ ತರಹದ ಗಾಯಗಳಾಗಿವೆ.

    Post Views: 224

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.