Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ : ಅಪರಿಚಿತ ಸಾವಿನ ಪ್ರಕರಣಗಳ UDR ಡಿಲೀಟ್
    ಇತ್ತೀಚಿನ ಸುದ್ದಿ

    ಧರ್ಮಸ್ಥಳ : ಅಪರಿಚಿತ ಸಾವಿನ ಪ್ರಕರಣಗಳ UDR ಡಿಲೀಟ್

    August 2, 2025
    Share

    ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು (UDR) ಡಿಲೀಟ್ ಆಗಿರುವ ಪ್ರತಿಕ್ರಿಯೆ ಕೇಳಿಬಂದ ನಂತರ ಬೆಳ್ತಂಗಡಿ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

    ಇದೇ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಆರೋಪಿಸಿದ್ದಾನೆ. 1998 ಮತ್ತು 2014ರ ನಡುವೆ ಲೈಂಗಿಕ ಅತ್ಯಾಚಾರಕ್ಕೊಳಗಾದ ಮಹಿಳೆಯರು, ಅಪ್ರಾಪ್ತ ಬಾಲಕಿಯರು ಸೇರಿದಂತೆ ಹಲವು ಶವಗಳನ್ನು ನನಗೆ ಹೂಳಿಸಲಾಗಿದೆಎಂದು ಆರೋಪಿ ಹೇಳಿರುವುದರಿಂದ ಈಗ ದಾಖಲೆಗಳ ನಾಶಪಡಿಸುವಿಕೆ ತೀವ್ರ ಕಳವಳಕ್ಕೆ ಕಾರಣವಾಗಿದೆ.

    ಮರಣೋತ್ತರ ಪರೀಕ್ಷೆಯ ವರದಿಗಳು, ನೋಟಿಸ್‌ಗಳು ಮತ್ತು ಮೃತ ವ್ಯಕ್ತಿಗಳ ಗುರುತನ್ನು ಪತ್ತೆಹಚ್ಚುವ ಪ್ರಯತ್ನಗಳಲ್ಲಿ ಬಳಸಲಾದ ಫೋಟೋಗಳನ್ನು ಆಡಳಿತಾತ್ಮಕ ಆದೇಶಗಳಿಗೆ ಅನುಗುಣವಾಗಿ ನಾಶಪಡಿಸಲಾಗಿದೆ ಎಂದು ಪೊಲೀಸರು ಆರ್ ಟಿಐ ಅರ್ಜಿಗೆ ಪ್ರತಿಕ್ರಿಯಿಸಿದ್ದಾರೆ.

    ನಿರ್ದಿಷ್ಟವಾಗಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ (ಸಿಆರ್‌ಪಿಸಿ) ಸೆಕ್ಷನ್ 174(ಎ) ಅಡಿಯಲ್ಲಿ 15 ವರ್ಷಗಳ ಅವಧಿಯಲ್ಲಿ ದಾಖಲಾದ ಯುಡಿಆರ್ ವಿವರಗಳನ್ನು ಆರ್ ಟಿಐನಡಿ ಕೇಳಲಾಗಿತ್ತು. ಆರ್ ಟಿಐನಡಿ ಕೇಳಲಾದ ದಾಖಲೆಗಳು ಲಭ್ಯವಿಲ್ಲ, ವಿವಿಧ ಸುತ್ತೋಲೆಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

    ಈ ಸಂಬಂಧ ಕರ್ನಾಟಕ ಸರ್ಕಾರರ ಜೂನ್ 26, 2013 ರ ಅಧಿಸೂಚನೆ ಮತ್ತು ನವೆಂಬರ್ 23, 2023 ರಂದು ಪೊಲೀಸ್ ಅಧೀಕ್ಷಕರು ಹೊರಡಿಸಿದ ಇತ್ತೀಚಿನ ಆದೇಶವನ್ನು ಉಲ್ಲೇಖಿಸಿದ್ದಾರೆ. ಉಳಿದ ಪ್ರಕರಣಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಆದರೆ ಕಾನೂನು ತಜ್ಞರು ಮತ್ತು ನಾಗರಿಕ ಸಂಘಟನೆಗಳು ಯುಡಿಆರ್ ಡಿಲೀಟ್ ಕಾನೂನುಬದ್ಧತೆ ಮತ್ತು ನೈತಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕ್ರಿಮಿನಲ್ ಪ್ರಕರಣದ ದಾಖಲೆಗಳನ್ನು ನಾಶಪಡಿಸಲು ಪೊಲೀಸ್ ಠಾಣೆಗಳಿಗೆ ಅಧಿಕಾರವಿಲ್ಲ ಎಂದು ಅವರು ವಾದಿಸಿದ್ದಾರೆ. ದಾಖಲೆಗಳನ್ನು ಡಿಲೀಟ್ ಮಾಡುವ ಮೊದಲು ಏಕೆ ಡಿಜಿಟಲೀಕರಣ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

    Post Views: 277

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.