Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಉಡುಪಿ: ತಾಯಿ, ಮೂವರು ಮಕ್ಕಳ ಕೊಲೆ ಪ್ರಕರಣ; ಮಾ.7ಕ್ಕೆ ವಿಚಾರಣೆ ಮುಂದೂಡಿಕೆ
    ಕರಾವಳಿ ಸುದ್ದಿ

    ಉಡುಪಿ: ತಾಯಿ, ಮೂವರು ಮಕ್ಕಳ ಕೊಲೆ ಪ್ರಕರಣ; ಮಾ.7ಕ್ಕೆ ವಿಚಾರಣೆ ಮುಂದೂಡಿಕೆ

    February 22, 2025
    Share

    ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವೀಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿ ಹಾಗೂ ಆರೋಪಿಯ ಕಾರನ್ನು ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾ. 7ಕ್ಕೆ ಕಾಯ್ದಿರಿಸಿದೆ.

    ಫೆ. 20ರಂದು ವಿಚಾರಣೆ ಹಿನ್ನೆಲೆಯಲ್ಲಿ ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಯಿತು. ಆರೋಪಿ ಚೌಗುಲೆಯು ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡುವಂತೆ ಬ್ಯಾಂಕ್ ಪರ ವಕೀಲರು ವಾದ ಮಂಡಿಸಿದರು. ಆರೋಪಿ ಪರ ವಕೀಲರು ಕಾರನ್ನು ಬ್ಯಾಂಕಿನವರ ವಶಕ್ಕೆ ನೀಡಲು ನಮ್ಮ ಆಕ್ಷೇಪವಿಲ್ಲ ಎಂದರು.ಆದರೆ ವಿಶೇಷ ಸರಕಾರಿ ಅಭಿಯೋಜಕರು, ಕಾರನ್ನು ಬ್ಯಾಂಕಿನವರಿಗೆ ನೀಡಿದರೆ ಮುಂದೆ ಅವರು ಅದನ್ನು ಮಾರಾಟ ಮಾಡಿದರೆ ಸಾಕ್ಷ್ಯ ವಿಚಾರಣೆಗೆ ತೊಂದರೆಯಾಗುತ್ತದೆ ಎಂಬುದಾಗಿ ಆಕ್ಷೇಪಣೆ ವ್ಯಕ್ತಪಡಿಸಿದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ಸಮೀವುಲ್ಲಾ, ಈ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಮಾ. 7ಕ್ಕೆ ಕಾಯ್ದಿರಿಸಲಾಗಿದೆ ಎಂದು ಆದೇಶಿಸಿದರು.ಮಾ. 7ರಂದೇ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವೀಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ಅಂತಿಮ ಆದೇಶವನ್ನು ಕೂಡ ನ್ಯಾಯಾಧೀಶರು ನೀಡಲಿದ್ದಾರೆ. ಈ ಅರ್ಜಿಗೂ ವಿಶೇಷ ಸರಕಾರಿ ಅಭಿಯೋಜಕರು, ಆಕ್ಷೇಪ ಸಲ್ಲಿಸಿದ್ದರು.

    Post Views: 150

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.