ಉಡುಪಿ : ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಘಟನೆ ಉಡುಪಿಯ ಹೊಟೇಲ್ ಒಂದರಲ್ಲಿ ನಡೆದಿದೆ. ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್ ಹೋಟೆಲ್ ನಲ್ಲಿನ ಗ್ಯಾಸ್ ಸಿಲಿಂಡರ್ ನಲ್ಲಿ ಸೋರಿಕೆ ಉಂಟಾಗಿತ್ತು ಇದರಿಂದ ಬೆಂಕಿ ಕಾಣಿಸಿಕೊಂಡು ಕೆಲವು ಸುತ್ತುಗಳಿಗೆ ಹಾನಿಯಾಗಿತ್ತು. ಕೂಡಲೆ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಸಂಭವಿಸಬಹುದ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.