Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಡಿವೈಡರ್‌ಗೆ ಗುದ್ದಿದ ಬೈಕ್;ವಿದ್ಯಾರ್ಥಿ ಮೃತ್ಯು -ಇಬ್ಬರಿಗೆ ಗಾಯ
    ಇತ್ತೀಚಿನ ಸುದ್ದಿ

    ಉಡುಪಿ: ಡಿವೈಡರ್‌ಗೆ ಗುದ್ದಿದ ಬೈಕ್;ವಿದ್ಯಾರ್ಥಿ ಮೃತ್ಯು -ಇಬ್ಬರಿಗೆ ಗಾಯ

    December 17, 2022
    Share

    ಉಡುಪಿ: ಬೈಕೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಉಡುಪಿ ಮಣಿಪಾಲದ ಟೈಗರ್ ಸರ್ಕಲ್ ಬಳಿ ನಡೆದಿದೆ.

    ಮೃತರನ್ನು ಸಹಸವಾರ ಶಿವಮೊಗ್ಗದ ಮೂಲದ ನಿಖಿಲ್ (23) ಎಂದು ಗುರುತಿಸಲಾಗಿದೆ. ಸವಾರ ನಿಹಾಲ್ ಹಾಗೂ ಇನ್ನೊರ್ವ ಸಹಸವಾರ ಮಹೇಂದ್ರ ಜಿ. ಎಂಬವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂವರು ಮಣಿಪಾಲ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಟೆಕ್ ವಿದ್ಯಾರ್ಥಿಗಳಾಗಿದ್ದಾರೆ. ಇವರು ಮೂವರು ನಿನ್ನೆ ಬೆಳಗ್ಗೆ ಒಂದು ಬೈಕಿನಲ್ಲಿ ಕೆಳ ಪರ್ಕಳ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದು, ಈ ವೇಳೆ ನಿಂತ್ರಯಣ ತಪ್ಪಿದ ಬೈಕ್ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಮೂವರು ರಸ್ತೆಗೆ ಬಿದ್ದಿದ್ದು, ಇವರಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ನಿಖಿಲ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.