Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು
    Uncategorized

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026
    Share

    ಉಡುಪಿ: ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ. ಮೃತ ಸಾತ್ವಿ ತನ್ನ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾಳೆ.
    ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ನಾಳೆ ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಾಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ. ದೂರವಷ್ಟೇ ಬಾಕಿ ಇತ್ತು. ಸ್ಕೂಟಿ ಸವಾರ ನಿತ್ಯಾನಂದ ಶೆಟ್ಟಿ ಅವರಿಗೂ ಗಾಯಗಳಾಗಿವೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Post Views: 33

    Related Posts

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026

    ನಿವೃತ್ತ ಪೋಸ್ಟ್ ಮಾಸ್ಟರ್‌ಗೆ 6 ಕೋಟಿ ರೂ. ಬಂಪರ್ ಲಾಟರಿ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.