Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ರಾಪ್ತ ಬಾಲಕಿಯ ಅತ್ಯಾಚಾರ ಎಸಗಿ ಗರ್ಭವತಿಯನ್ನಾಗಿಸಿದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
    ಇತ್ತೀಚಿನ ಸುದ್ದಿ

    ಅಪ್ರಾಪ್ತ ಬಾಲಕಿಯ ಅತ್ಯಾಚಾರ ಎಸಗಿ ಗರ್ಭವತಿಯನ್ನಾಗಿಸಿದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

    July 30, 2025
    Share

    ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಗರ್ಭವತಿಯನ್ನಾಗಿಸಿದ ಆರೋಪಿಯನ್ನು ‘ದೋಷಿ’ ಎಂದು ಘೋಷಿಸಿ, 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಆದೇಶಿಸಿದೆ.

    ಈ ಪ್ರಕರಣದ ದೋಷಿಯು ಮೂರು ಮಕ್ಕಳ ತಂದೆಯಾಗಿದ್ದು, ಬಾಲಕಿಯ ಸಂಬಂಧಿಯೂ ಆಗಿದ್ದಾನೆ. ಬಾಲಕಿಯ ಮೇಲೆ ಬಲವಂತದ ಲೈಂಗಿಕ ದೌರ್ಜನ್ಯ ಎಸಗಿದ ಈತ ಈ ವಿಷಯವನ್ನು ಪೋಷಕರಿಗೆ ತಿಳಿಸಿದರೆ ಜೀವಕ್ಕೆ ತೊಂದರೆ ಮಾಡುವುದಾಗಿ ಬೆದರಿಸಿದ್ದ. ಹಲವು ಬಾರಿ ಸಂತ್ರಸ್ತೆ ಮೇಲೆ ದೌರ್ಜನ್ಯ ಎಸಗಿರುವುದು ತನಿಖೆಯಿಂದ ತಿಳಿದು ಬಂದಿದೆ.

    2024ರ ಆಗಸ್ಟ್‌ನಲ್ಲಿ ನೊಂದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ತಪಾಸಣೆ ಒಳಪಡಿಸಿದಾಗ ಗರ್ಭವತಿಯಾಗಿರುವುದು ತಿಳಿದು ಬಂದಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಬೈಂದೂರು ಸಿಪಿಐ ಸವೀತ್ರಾ ತೇಜಾ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಒಟ್ಟು 27 ಸಾಕ್ಷಿಗಳ ಪೈಕಿ 12 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ನೊಂದ ಬಾಲಕಿಯ ಸಾಕ್ಷಿ ಮತ್ತು ಡಿಎನ್‌ಎ ವರದಿ ಆಧರಿಸಿ ಆರೋಪಿಯನ್ನು ‘ದೋಷಿ’ ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈಟಿ ರಾಘವೇಂದ್ರ ವಾದಿಸಿದ್ದಾರೆ.

    ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗು 25 ಸಾವಿರ ರೂ. ದಂಡ ವಿಧಿಸಲಾಗಿದೆ. ಸರಕಾರದಿಂದ ಸಂತ್ರಸ್ತ ಬಾಲಕಿಗೆ 3 ಲಕ್ಷ ರೂ ಪರಿಹಾರ ನೀಡುವಂತೆಯೂ ಆದೇಶಿಸಲಾಗಿದೆ.

    Post Views: 237

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.