ಉಡುಪಿ: ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 19 ರಂದು ಮುಂಜಾನೆ ಸಂಭವಿಸಿದ ಗ್ಯಾಂಗ್ ವಾರ್ ಗೆ ಸಂಬಂಧಿಸಿದಂತೆ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಾಪು ಕೊಂಬಗುಡ್ಡೆ ಮೂಲದ ಆಶಿಕ್, ತೋನ್ಸೆ ಹೂಡೆಯ ರಾಕೀಬ್ ಹಾಗೂ ಸಕ್ಲೈನ್, ಬ್ರಹ್ಮಾವರದ ಶರೀಫ್, ಕಾಪು ಮೂಲದ ಮಜೀದ್, ಅಲಾಝ್ ಪ್ರಕರಣದ ಬಂಧಿತ ಆರೋಪಿಗಳು. ಈ 6 ಮಂದಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಗ್ಯಾಂಗ್‌ವಾರ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ಹಾಗೂ ವೀಡಿಯೋ ಆಧರಿಸಿ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದರು. ಬಳಿಕ ಘಟನೆಗೆ ಸಂಬಂಧ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.