Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಉಡುಪಿ ಯುವತಿಯ ಸಾಧನೆ: ಸೀಮಾ ತೆಂಡೂಲ್ಕರ್ ಭಾರತೀಯ ನೌಕಾಪಡೆಯಲ್ಲಿ ಪೈಲಟ್ ಆಗಿ ಆಯ್ಕೆ
    ಕ್ರೈಂ ಸ್ಟೋರಿ

    ಉಡುಪಿ ಯುವತಿಯ ಸಾಧನೆ: ಸೀಮಾ ತೆಂಡೂಲ್ಕರ್ ಭಾರತೀಯ ನೌಕಾಪಡೆಯಲ್ಲಿ ಪೈಲಟ್ ಆಗಿ ಆಯ್ಕೆ

    June 9, 2025
    Share

    ಉಡುಪಿ, ಜೂ. 09 : ಸಾಧಿಸುವ ಛಲವೊಂದಿದ್ದರೆ ಸಾಕು ಯಾವುದೇ ಮಹತ್ವಾಕಾಂಕ್ಷೆಯ ಕನಸುಗಳನ್ನು ನನಸಾಗಿಸಿಕೊಳ್ಳುವುದು ಕಷ್ಟವಲ್ಲ ಎಂಬುದನ್ನು ಉಡುಪಿ ಜಿಲ್ಲೆಯ ಒಂದು ಪುಟ್ಟ ಗ್ರಾಮದ ಯುವತಿಯೊಬ್ಬಳು ಸಾಬೀತುಪಡಿಸಿದ್ದಾರೆ. ಪೆರ್ಣಂಕಿಲ ಎಂಬ ಪುಟ್ಟ ಗ್ರಾಮದ ಸದಾನಂದ ನಾಯಕ್ ಮತ್ತು ಜಯಶ್ರೀ ತೆಂಡೂಲ್ಕರ್ ದಂಪತಿಯ ಪುತ್ರಿ ಸೀಮಾ ತೆಂಡೂಲ್ಕರ್, ಭಾರತೀಯ ನೌಕಾಪಡೆಯಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.

    ಬಾಲ್ಯದಿಂದಲೇ ಸೀಮಾ ಅವರು ಭಾರತೀಯ ಸೇನೆಗೆ ಸೇರ್ಪಡೆಗೊಳ್ಳಬೇಕೆಂಬ ಕನಸು ಕಂಡಿದ್ದರು. ಅದನ್ನೇ ಬದುಕಿನ ಗುರಿಯಾಗಿಸಿಕೊಂಡಿದ್ದ ಸೀಮಾ ಅವರು, ತಮ್ಮ ಬಾಲ್ಯದ ಆಕಾಂಕ್ಷೆಯನ್ನು ನನಸಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಿರಿಯಡಕದ ಖಾಸಗಿ ಶಾಲೆಯಲ್ಲಿ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿದ ಅವರು, ನಂತರ ಕಾರ್ಕಳದ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರ್ಣಗೊಳಿಸಿದರು. ನಂತರ ಬೆಂಗಳೂರಿನ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ಪದವಿ ಪಡೆದರು.ಇಂಜಿನಿಯರಿಂಗ್‌ನಲ್ಲಿ ಪದವಿ ಗಳಿಸಿದರೂ, ಮನಸ್ಸು ಇದ್ದದ್ದು ಭಾರತೀಯ ಸೇನೆ ಕಡೆಗೆ. ಸಶಸ್ತ್ರ ಪಡೆಗಳು ನಡೆಸಿದ ನೇರ ಸಂದರ್ಶನವನ್ನು ಯಶಸ್ವಿಯಾಗಿ ಪೂರೈಸಿದ ಅವರು, ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಆಯ್ಕೆಯಾದರು. ಪ್ರಸ್ತುತ ಅವರು ಕೇರಳದ ಭಾರತೀಯ ನೌಕಾ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

    ಸೀಮಾ ಅವರ ತಂದೆ ಕೃಷಿಕರಾಗಿದ್ದು, ಅವರ ತಾಯಿ ಖಾಸಗಿ ಶಾಲೆಯೊಂದರಲ್ಲಿ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಲೇಜು ದಿನಗಳಲ್ಲಿ ಎನ್‌ಸಿಸಿಯಲ್ಲಿ ತೊಡಗಿಸಿಕೊಂಡ ಸೀಮಾ, 2022ರಲ್ಲಿ ಗಣರಾಜ್ಯೋತ್ಸವ ಪರೇಡ್‌ನ ಗಾರ್ಡ್ ಆಫ್ ಆನರ್ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.”ನನಗೆ ಚಿಕ್ಕಂದಿನಿಂದಲೂ ಭಾರತೀಯ ಸೇನೆಯನ್ನು ಸೇರಬೇಕೆಂಬ ಆಸೆ ಇತ್ತು. ಅದಕ್ಕಾಗಿಯೇ ನಾನು ಎನ್‌ಸಿಸಿಗೆ ಸೇರಿದೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದಾಗ ನನ್ನ ಆಸೆ ಮತ್ತಷ್ಟು ದೊಡ್ಡದಾಯಿತು. ನನ್ನ ಕನಸು ನನಸಾಗಿರುವುದರಿಂದ ನಾನು ಅತ್ಯಂತ ಸಂತೋಷವಾಗಿದ್ದೇನೆ” ಎಂದು ಸೀಮಾ ತೆಂಡೂಲ್ಕರ್ ತಿಳಿಸಿದ್ದಾರೆ

    Post Views: 576

    BreakingBarriers DefenceForces GirlPower IndianNavy InspiringJourney MotivationalStory NavyPilot NCCCadet SeemaTendulkar WomenInUniform

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026

    ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.