Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಪಹರಣ ಪ್ರಕರಣ- ತೆಲಂಗಾಣದಲ್ಲಿ ಆರೋಪಿಗಳ ಬಂಧನ, ವ್ಯಕ್ತಿ ರಕ್ಷಣೆ..!!
    ಇತ್ತೀಚಿನ ಸುದ್ದಿ

    ಉಡುಪಿ: ಅಪಹರಣ ಪ್ರಕರಣ- ತೆಲಂಗಾಣದಲ್ಲಿ ಆರೋಪಿಗಳ ಬಂಧನ, ವ್ಯಕ್ತಿ ರಕ್ಷಣೆ..!!

    April 12, 2026
    Share

    ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರಭಾಗದಲ್ಲಿ ವ್ಯಕ್ತಿಯನ್ನು ಬಲವಂತವಾಗಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

    ಪೊಲೀಸರ ಮಾಹಿತಿ ಪ್ರಕಾರ ಮಾರ್ಚ್ 31 ರಾತ್ರಿ 8.15 ಗಂಟೆ ಸುಮಾರಿಗೆ ಕುಂದಾಪುರ ತಾಲೂಕಿನ ದಾಸರಮಕ್ಕಿ ನಿವಾಸಿ ರಾಮ ಮಡಿವಾಳ ಅವರು ತಮ್ಮ ತಮ್ಮ ಲಕ್ಷ್ಮಣರಿಗೆ ಚಿಕಿತ್ಸೆ ನೀಡಲು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಚಿಕಿತ್ಸೆ ಬಳಿಕ ಆಸ್ಪತ್ರೆಯ ಕ್ಯಾಂಟೀನಿನಲ್ಲಿ ರಾಮ ಮಡಿವಾಳ, ಅವರ ಅಣ್ಣ ರಾಜೇಶ್ ಹಾಗೂ ಸುಧೀರ್ ಟೀ ಕುಡಿಯುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 12.15 ಗಂಟೆಗೆ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ ಕಾರಿನಲ್ಲಿ ಏಳು-ಎಂಟು ಮಂದಿ ಬಂದು ರಾಜೇಶ್ ಅವರನ್ನು ಬಲವಂತವಾಗಿ ಹಿಡಿದು ಕಾರಿನಲ್ಲಿ ಕೂರಿಸಿ ಅಪಹರಿಸಿ ಮಣಿಪಾಲದಿಂದ ಹಿರಿಯಡ್ಕ ರಸ್ತೆಯ ಕಡೆಗೆ ತೆರಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಈ ಕುರಿತು ನೀಡಿದ ದೂರಿನ ಮೇರೆಗೆ ಮಲ್ಲಾರೆಡ್ಡಿ, ತುಳಜಾ, ನರಸಿಂಗ, ಹುಸೇನ್, ಶಂಕರ, ನಾಗೇಶ್, ಪರಮೇಶ್ವರ್ ಹಾಗೂ ವಿಜಯ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ವ್ಯವಹಾರ ಸಂಬಂಧಿತ ವಿಚಾರದಲ್ಲಿ ಈ ಹಿಂದೆ ಪಿರ್ಯಾದಿದಾರರ ಮನೆಗೆ ಬಂದಿದ್ದು, ಅದೇ ಹಿನ್ನೆಲೆಯಲ್ಲಿ ಅಪಹರಣ ನಡೆಸಿರುವ ಶಂಕೆ ವ್ಯಕ್ತವಾಗಿದೆ.

    ಪ್ರಕರಣ ಪತ್ತೆಗಾಗಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತಂಡದಲ್ಲಿ ಪಿಎಸ್ಐ ತಿಮ್ಮೇಶ್ ಬಿ.ಎನ್., ಸೈಬರ್ ಪೊಲೀಸ್ ಠಾಣೆಯ ಪಿಎಸ್ಐ ಸುದರ್ಶನ್ ದೊಡ್ಡಮನಿ ಸೇರಿದಂತೆ ಅಪರಾಧ ಸಿಬ್ಬಂದಿ ಭಾಗವಹಿಸಿದ್ದರು.

    ತನಿಖೆಯ ಸಂದರ್ಭದಲ್ಲಿ ಆರೋಪಿಗಳ ಸುಳಿವು ಪತ್ತೆಯಾಗಿ, ಪಿಎಸ್ಐ ಸುದರ್ಶನ್ ನೇತೃತ್ವದ ತಂಡವು ತೆಲಂಗಾಣ ರಾಜ್ಯದ ಜಗತಿಹಾಳ್ ಜಿಲ್ಲೆಯ ಕರೀಂನಗರದ ಗೋವಿಂದಪಳ್ಳಿ ಪ್ರದೇಶದ ಸಿಲ್ವರ್ ಸ್ಕೈ ಲಾಡ್ಜ್ನಲ್ಲಿ ಏಪ್ರಿಲ್ 9 ರಂದು ಮುಂಜಾನೆ 3.30 ಗಂಟೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.

    ಈ ವೇಳೆ ಅಪಹರಣಕ್ಕೆ ಬಳಸಿದ TG 05 C 1716 ನಂಬರಿನ ಕಿಯಾ ಕ್ಯಾರೆನ್ಸ್ ಕಾರು ಹಾಗೂ ನಂಬರ್ ಪ್ಲೇಟ್ ಇಲ್ಲದ ಮಹಿಂದ್ರ ಥಾರ್ ಕಾರನ್ನು ವಶಪಡಿಸಿಕೊಂಡು, ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 168

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.