ಉಡುಪಿ: ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಡುಪಿ ಅಂಬಾಗಿಲು ಬಿರಿಯಾನಿ ಸ್ಪಾಟ್ ಹೋಟೆಲ್ ಎದುರುಗಡೆ ರಾಹೆ-66 ರಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಜಯರಾಮ್ (67) ಎಂದು ಗುರುತಿಸಲಾಗಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್, ರಸ್ತೆ ದಾಟುತ್ತಿದ್ದ ಜಯರಾಮ್ ಅವರಿಗೆ ಢಿಕ್ಕಿ ಹೊಡೆದಿದ್ದು, ಇದರಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.