Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ
    ಕರಾವಳಿ ಸುದ್ದಿ

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025
    Share

    ಉಡುಪಿ : ಕಾರು ಚಾಲಕನ ಅಜಾಗರೂಕತೆಯ ಚಾಲನೆಗೆ ಎಂಬಿಎ ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ಪ್ರಸಿದ್ಧ ಭಕ್ತಿ ಗಾಯಕ ಮತ್ತು ತಬಲಾ ವಾದಕರೂ ಆಗಿದ್ದ ಎಂಬಿಎ ವಿದ್ಯಾರ್ಥಿ ಕಿದಿಯೂರು ನಿವಾಸಿ ಸಂಕೀರ್ತನ್ (28) ಎಂದು ಗುರುತಿಸಲಾಗಿದೆ.

    ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರನ್ನು ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ಸಂಭವಿಸಿದೆ. ಕಾರು ಮೊದಲು ಗೂಡ್ಸ್ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಡಿವೈಡರ್ ಏರಿ ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿ ಸಂಕೀರ್ತನ್‌ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದರು. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಭಜನೆ ಹಾಡುಗಾರ ಕಿದಿಯೂರಿನ ಸುರೇಶ್‌ ಆಚಾರ್ಯ ಅವರ ಪುತ್ರನಾಗಿದ್ದ ಸಂಕೀರ್ತನ್‌ ತಬಲಾ, ಹಾರ್ಮೋನಿಯಂ ವಾದಕರಾಗಿದ್ದರು. ನಿತ್ಯಾನಂದ ಭಜನ ಮಂದಿರ, ಕನ್ನರ್ಪಾಡಿ ಜಯದುರ್ಗಾಪರಮೇಶ್ವರೀ, ಪ್ರಸನ್ನ ಗಣಪತಿ, ವೀರ ವಿಠಲ ದೇವಸ್ಥಾನಲ್ಲಿ ಭಜನ ಕಾರ್ಯಕ್ರಮದಲ್ಲಿ ಸಕ್ರಿಯರಾಗಿದ್ದರು. ಪ್ರಸ್ತುತ ಅವರು ಮೂಡುಬಿದಿರೆ ಆಳ್ವಾಸ್‌ ಎಂಜಿನಿಯರ್‌ ಕಾಲೇಜಿನಲ್ಲಿ ಅಂತಿಮ ಎಂಬಿಎ ವಿದ್ಯಾರ್ಥಿಯಾಗಿದ್ದರು.

    Post Views: 252

    AccidentNews karnataka mangalore udupi

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.