ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್ ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು.
ಈ ಸಂಬಂಧ ಮಂಗಳವಾರ ಮಧ್ಯರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿದ ಕಾಂಗ್ರೆಸ್ ಮುಖಂಡರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ದೂರು ಸಲ್ಲಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವರು ನೀಡಿದ ದೂರದಂತೆ ಶಾಸಕ ಯಶ್ ಪಾಲ್ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಕೀಲರಾದ ಹಬೀಬ್ ಅಲಿ, ಹರೀಶ್ ಪಾಂಗಳ ಮೊದಲಾದವರು ಹಾಜರಿದ್ದರು.




