Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಕೇಸ್: ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಕೇಸ್: ಆರೋಪಿ ಅರೆಸ್ಟ್

    November 14, 2023
    Share

    ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು. ಈ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

    ಉಡುಪಿಯಲ್ಲಿ ಕೆಲ ದಿನಗಳ ಹಿಂದೆ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಂತ ಘಟನೆ ನಡೆದಿತ್ತು.

    ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಹತ್ಯೆ ಮಾಡಲಾಗಿತ್ತು. ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23 ), ಅಯ್ನಾಝ್ (21 ), ಆಸಿಂ (12 ) ಎಂದು ಗುರುತಿಸಲಾಗಿತ್ತು.

    ಈ ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದರು. ಏಕಾಏಕಿ ಮನೆಗೆ ನುಗ್ಗಿ ಮಾತಿನ ಚಕಮಕಿ ನಡೆದ ಬಳಿಕ ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫ್ನಾನ್, ಐನಾಜ್ ಗೆ ಇರಿದ ದುಷ್ಕರ್ಮಿ, ಬಳಿಕ ಅಲ್ಲೇ ಆಟವಾಡುತ್ತಿದ್ದ ಆಸೀಮ್ ಸದ್ದು ಕೇಳಿ ಒಳ ಬರುತ್ತಿದ್ದಂತೆ ಆತನನ್ನು ಕೂಡ ದುಷ್ಕರ್ಮಿ ಇರಿದುಕೊಂದಿದ್ದಾನೆ ಎನ್ನಲಾಗಿತ್ತು.

    ಬೊಬ್ಬೆ ಕೇಳಿ ಹೊರಗಡೆ ಬಂದ ಪಕ್ಕದ ಮನೆ ಯುವತಿಯನ್ನು ಬೆದರಿಸಿ ದುಷ್ಕರ್ಮಿ ಅಲ್ಲಿಂದ ಕಾಲ್ಕಿತ್ತಿದ್ದನು. ಇನ್ನು ಜೀವಾಂತ್ಯಗೊಳಿಸಿದ ಮಹಿಳೆಯ ಅತ್ತೆಗೂ ತೀವ್ರ ತರಹದ ಗಾಯಗಳಾಗಿದ್ದವು. ಈ ಘಟನೆಯ ಕುರಿತಂತೆ ತನಿಖೆಗೆ ಇಳಿದಂತ ಪೊಲೀಸರು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿ ಮಂಗಳೂರು ಏರ್ ಪೋರ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದನು. ಸಿಆರ್ ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದತಂ ಪ್ರವೀಣ್, ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಚಾಕುವಿನಿಂದ ಇರಿದು ಪರಾರಿಯಾಗಿದ್ದನು. ಈಗ ಆತನನ್ನ ಬಂಧಿಸಿದ್ದು, ಉಡುಪಿಗೆ ಕರೆತರಲಾಗುತ್ತಿದೆ.

    Post Views: 436

    Related Posts

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.