Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪೊಲೀಸ್ ಠಾಣೆಯಲ್ಲಿ ಆರೋಪಿ ರಾಸಾಯನಿಕ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನ
    ಇತ್ತೀಚಿನ ಸುದ್ದಿ

    ಉಡುಪಿ: ಪೊಲೀಸ್ ಠಾಣೆಯಲ್ಲಿ ಆರೋಪಿ ರಾಸಾಯನಿಕ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನ

    September 26, 2025
    Share

    ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಂಧನದಲ್ಲಿದ್ದ ಯುವಕನೊಬ್ಬ ರಾಸಾಯನಿಕ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ  ಬೆಳಕಿಗೆ ಬಂದಿದೆ.

    ಪೊಲೀಸ್ ಮೂಲಗಳ ಪ್ರಕಾರ, ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 43/2025 ಪ್ರಕರಣದಲ್ಲಿ 2ನೇ ಆರೋಪಿ ರಕ್ಷಿತ್ ಶೆಟ್ಟಿ (22) ಅವರನ್ನು ಸೆಪ್ಟೆಂಬರ್ 22ರಂದು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) ತನಿಖಾ ಉದ್ದೇಶಕ್ಕಾಗಿ ಪೊಲೀಸ್ ಅಭಿರಕ್ಷೆಗೆ ಒಪ್ಪಿಸಿತ್ತು.

    ಮಂಗಳವಾರ (ಸೆ. 23) ಬೆಳಗ್ಗೆ ಸುಮಾರು 7:30ರ ಹೊತ್ತಿಗೆ, ಆರೋಪಿ ಶೌಚಾಲಯಕ್ಕೆ ಹೋಗಲು ಗಾರ್ಡ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳಿಗೆ ತಿಳಿಸಿದ್ದಾನೆ.

    ಸಿಬ್ಬಂದಿ ಆರೋಪಿ ಜೊತೆ ಶೌಚಾಲಯಕ್ಕೆ ತೆರಳಿದಾಗ, ಅವರ ಕಣ್ಣು ತಪ್ಪಿಸಿ ಬದಿಯಲ್ಲಿ ಶೌಚಾಲಯ ಸ್ವಚ್ಛತೆಗೆ ಇಡಲಾಗಿದ್ದ HARPIC ರಾಸಾಯನಿಕ ದ್ರವವನ್ನು ಸೇವಿಸಿದ್ದಾನೆಂದು ತಿಳಿದುಬಂದಿದೆ.

    ಘಟನೆಯ ನಂತರ ತಕ್ಷಣವೇ ಪೊಲೀಸರು ಆರೋಪಿ ಮೇಲೆ ಚಿಕಿತ್ಸೆ ನೀಡಿದ್ದು, ಈ ಆತ್ಮಹತ್ಯಾ ಯತ್ನವು ತನಿಖಾ ಪ್ರಕ್ರಿಯೆಗೆ ಅಡ್ಡಿಯಾಗುವ ಉದ್ದೇಶದಿಂದ ನಡೆದಿತ್ತೆಂಬ ಅನುಮಾನ ವ್ಯಕ್ತವಾಗಿದೆ.

    ಈ ಕುರಿತು ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಸುಜಾತ ಸಾಲ್ಯಾನ್ ಅವರ ದೂರು ಆಧಾರದಲ್ಲಿ, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 177/2025, ಕಲಂ 226 BNS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Post Views: 100

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.