Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಟಿಪ್ಪರ್‌ ಅಪಘಾತ, ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು
    ಇತ್ತೀಚಿನ ಸುದ್ದಿ

    ಉಳ್ಳಾಲ: ಟಿಪ್ಪರ್‌ ಅಪಘಾತ, ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು

    July 2, 2024
    Share

    ಉಳ್ಳಾಲ: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

    ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ (27) ಮೃತ ದುರ್ದೈವಿ.ಗಣೇಶ್‌ ಆಚಾರ್ಯ ಅವರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸಹಕರಿಸಿದ ಹಿತೈಷಿಗಳ, ಸಂಬಂಧಿಕರ, ಸ್ನೇಹಿತರ ಪ್ರಾರ್ಥನೆ ಕೊನೆಗೂ ಈಡೇರಲಿಲ್ಲ.ಜೂ.28 ರಂದು ಗಣೇಶ ಅವರು ಪಾವೂರು ಹರೇಕಳ ಕಡೆಯಿಂದ ಕೊಣಾಜೆ ಕಡೆಗೆ ತೆರಳುವ ವೇಳೆ ಬೆಳಿಗ್ಗೆ 11.50ರ ಸುಮಾರಿಗೆ ಹರೇಕಳ ಗ್ರಾಮ ಪಂಚಾಯತ್‌ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿತ್ತು. ಟಿಪ್ಪರ್‌ ವಾಹನ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ನಡೆಸಿ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್‌ ಢಿಕ್ಕಿ ಹೊಡೆದು ಸ್ಕೂಟರ್‌ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಇನ್ನು ಟಿಪ್ಪರ್‌ ಲಾರಿ ಚಾಲಕ ಮಹಮ್ಮದ್‌ ಹನೀಫ್‌ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.ಗಾಯಾಳುವನ್ನು ತಕ್ಷಣ ಟಿಪ್ಪರ್‌ ಚಾಲಕ ಸೇರಿದಂತೆ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್‌ ಆಗಿದ್ದ ಗಣೇಶ್‌, ಮನೆಯ ಹಿರಿಯ ಪುತ್ರನಾಗಿದ್ದು, ಜೀವನಾಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಮೃತ ಗಣೇಶ್‌ ಆಚಾರ್ಯ ಶಸ್ತ್ರಚಿಕಿತ್ಸೆಗೆಂದು 10 ಲಕ್ಷ ರೂ. ಖರ್ಚಾಗುವುದರಿಂದ ಸ್ನೇಹಿತರು ವಾಟ್ಸ್ಯಾಪ್‌ ಮೂಲಕ ದಾನಿಗಳ ಸಹಕಾರವನ್ನು ಸಹ ಕೋರಿದ್ದರು.

    Post Views: 249

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.