ನವದೆಹಲಿ : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಪೊಲೀಸ್, ಬಿ.ಎ. ಉಮೇಶ್ ಅಲಿಯಾಸ್ ಉಮೇಶ್ ರೆಡ್ಡಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಉಮೇಶ್ ರೆಡ್ಡಿಗೆ ರಿಲೀಫ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಸಿಜೆಐ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಕ್ರೂರ ಶಿಕ್ಷೆಯಾಗಬೇಕು, ಆತನನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ನೊಂತ ಸಂತ್ರಸ್ತ ಕುಟುಂಬದವರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದವು. ನಂತರ ಉಮೇಶ್ ರೆಡ್ಡಿ ತಾಯಿ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದು ಅದು 2013ರಲ್ಲಿ ತಿರಸ್ಕರಿಸಲ್ಪಟ್ಟಿತ್ತು.