Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಧಿಕಾರಲಿಲ್ಲದಿದ್ದರೂ, ರಾಷ್ಟ್ರೀಯ ಲಾಂಛನ, ಧ್ವಜ ಬಳಕೆ : ಮಾರ್ಗಸೂಚಿ ರಚಿಸಿ ಹೈಕೋರ್ಟ್ ಆದೇಶ
    ಇತ್ತೀಚಿನ ಸುದ್ದಿ

    ಅಧಿಕಾರಲಿಲ್ಲದಿದ್ದರೂ, ರಾಷ್ಟ್ರೀಯ ಲಾಂಛನ, ಧ್ವಜ ಬಳಕೆ : ಮಾರ್ಗಸೂಚಿ ರಚಿಸಿ ಹೈಕೋರ್ಟ್ ಆದೇಶ

    April 25, 2025
    Share

    ಬೆಂಗಳೂರು : ಅಧಿಕಾರದಲ್ಲಿ ಇಲ್ಲದೆ ಇದ್ದರೂ ಕೂಡ ಮಾಜಿ ಶಾಸಕರು ಸಂಸದರು ರಾಷ್ಟ್ರೀಯ ಲಾಂಛನ, ರಾಷ್ಟ್ರೀಯ ಧ್ವಜ ಹಾಗೂ ಸರ್ಕಾರದ ಲೆಟರ್ ಹೆಡ್ ಗಳನ್ನು ಬಳಸುತ್ತಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಆಕ್ರೋಶ ಹೊರ ಹಾಕಿದ್ದು, ಇದೀಗ ರಾಷ್ಟ್ರೀಯ ಲಾಂಛನಗಳ ಬಳಕೆಗೆ ಸಂಬಂಧಿಸಿದಂತೆ ಹಲವು ಮಾರ್ಗಸೂಚಿಗಳನ್ನು ರಚಿಸಿ ಆದೇಶ ಹೊರಡಿಸಿದೆ.

    ಮಾಜಿ ಶಾಸಕರು, ಸಂಸದರು ರಾಷ್ಟ್ರೀಯ ಲಾಂಛನಗಳು ಮತ್ತು ಧ್ವಜಗಳನ್ನು ತಮ್ಮ ಲೆಟರ್‌ಹೆಡ್‌ ಹಾಗೂ ವಾಹನಗಳಿಗೆ ಬಳಕೆ ಮಾಡುತ್ತಿರುವುದು ನಿಜಕ್ಕೂ ದುರುದೃಷ್ಠಕರ ಎಂದಿರುವ ಹೈಕೋರ್ಟ್‌, ರಾಷ್ಟ್ರೀಯ ಲಾಂಚನಗಳು ಮತ್ತು ಧ್ವಜದ ಹೆಸರುಗಳನ್ನು ಬಳಕೆ ತಡೆಯಲು ಕೋರಿ ಹೈಕೋರ್ಟ್‌ ಕಾನೂನು ಸೇವೆಗಳ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

    ಸಾರ್ವಜನಿಕ ಸ್ಥಳಗಳು ಮತ್ತು ವಾಹನಗಳಲ್ಲಿ ರಾಷ್ಟ್ರೀಯ ಚಿಹ್ನೆಗಳು ಮತ್ತು ಲಾಂಛನಗಳನ್ನು ಅನಧಿಕೃತ ಬಳಕೆ ಮತ್ತು ದುರುಪಯೋಗ ತಡೆಗಟ್ಟಲು 1950ರ ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯಿದೆ ಮತ್ತು 1982ರ ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

    ಅಲ್ಲದೆ, ಭಾರತದ ರಾಜ್ಯ ಲಾಂಛನ (ಅನುಚಿತ ಬಳಕೆ ನಿಷೇಧ) ಕಾಯ್ದೆ, 2005, ಮತ್ತು ಭಾರತದ ರಾಜ್ಯ ಲಾಂಛನ (ಬಳಕೆ ನಿಯಂತ್ರಣ) ನಿಯಮಗಳು, 2007, 2010ರ ನಿಯಮಗಳು ಮತ್ತು ಕೇಂದ್ರ ಮೋಟಾರು ವಾಹನ ನಿಯಮಗಳು, 1989ರ ಎಲ್ಲ ಕಾಯಿದೆಗಳಲ್ಲಿ ಅನ್ವಯವಾಗುವ ನಿಯಮಗಳು, ಮತ್ತು ಕರ್ನಾಟಕ ಮೋಟಾರು ವಾಹನ ನಿಯಮಗಳು, 1989, ವಿಶೇಷವಾಗಿ 145-A (ರಾಜ್ಯ ಲಾಂಛನದ ಅನುಚಿತ ಬಳಕೆಯನ್ನು ನಿಷೇಧಿಸುವುದು) ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಕೋರ್ಟ್​ ಸೂಚಿಸಿದೆ.

    Post Views: 250

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.