Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್ಮುಂದೆ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸಿದರೆ ಬೀಳುತ್ತೆ ಭಾರಿ ದಂಡ!
    ಇತ್ತೀಚಿನ ಸುದ್ದಿ

    ಇನ್ಮುಂದೆ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸಿದರೆ ಬೀಳುತ್ತೆ ಭಾರಿ ದಂಡ!

    August 16, 2025
    Share

    ದೇಗುಲದ ವಾತಾವರಣವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕದ ಎಲ್ಲಾ ದೇವಸ್ಥಾನಗಳ ಒಳಾಂಗಣದಲ್ಲಿ ಪ್ಲಾಸ್ಟಿಕ್ ಬಳಕೆ ಬ್ಯಾನ್‌ ಮಾಡಲಾಗಿದೆ ಈ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ರಾಮನಗರದಲ್ಲಿ ಹೇಳಿದ್ದಾರೆ.

    ದೇವಸ್ಥಾನದ ಒಳಗೆ ಪ್ಲಾಸ್ಟಿಕ್ ನಿಷೇಧವಿದ್ದು, ಹೊರಭಾಗದಲ್ಲಿ ನಿಷೇಧ ಹೇರುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸಲಿವೆ. ಇದರ ಜೊತೆಗೆ, ದೇವಸ್ಥಾನಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಸರ್ಕಾರವು ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ.

    ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಮನಗರದಲ್ಲಿ ಈ ವಿಷಯ ತಿಳಿಸಿದರು. ದೇವಸ್ಥಾನದ ಒಳಾಂಗಣದಲ್ಲಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಲಾಗಿದೆ. ದೇವಸ್ಥಾನದ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧಾರ ಮಾಡುತ್ತವೆ. ಈ ನಿರ್ಧಾರವನ್ನು ಪರಿಸರದ ಸ್ವಚ್ಛತೆಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಿವರಿಸಿದರು.

    ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು ಉಲ್ಲಂಘಿಸಿದರೆ ದಂಡ ವಿಧಿಸುವಂತೆ ದೇವಸ್ಥಾನದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇಗುಲಕ್ಕೆ ಬರುವ ಭಕ್ತಾಧಿಗಳು ವಿಶೇಷದಿನದಂದು ಬಂದು ಪೂಜೆಗಳನ್ನು ಮಾಡಿಸುತ್ತಾರೆ. ಆಗ ಹೂ ಹಣ್ಣು ಕಾಯಿಗಳನ್ನು ಪ್ಲಾಸ್ಟಿಕ್‌ನಲ್ಲಿ ತಂದಿರುತ್ತಾರೆ. ಹಾಗೆಯೇ ನೂರಾರು ಜನರು ತರುವ ಹಿನ್ನೆಲೆ, ಪ್ಲಾಸ್ಟಿಕ್‌ ನಿಷೇಧಿಸಲಾಗಿದೆ

    Post Views: 115

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.