Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಳೆ ಕೇರಳದ ಮೊದಲ ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼಗೆ ಪ್ರಧಾನಿ ಮೋದಿ ಚಾಲನೆ
    ಇತ್ತೀಚಿನ ಸುದ್ದಿ

    ನಾಳೆ ಕೇರಳದ ಮೊದಲ ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼಗೆ ಪ್ರಧಾನಿ ಮೋದಿ ಚಾಲನೆ

    April 24, 2023
    Share

    ನವದೆಹಲಿ: ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಂದ್ರೆ, ನಾಳೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ಚಾಲನೆ ನೀಡಲಿದ್ದಾರೆ.

    ಪ್ರಧಾನಿ ಕಾರ್ಯಾಲಯದ ಪ್ರಕಾರ, ವಂದೇ ಭಾರತ್ ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ.

    ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ತಯಾರಿಸಿದ, ಅರೆ-ಹೈ ಸ್ಪೀಡ್ ಮತ್ತು ಸ್ವಯಂ ಚಾಲಿತ ರೈಲು ಸೆಟ್ ಆಗಿದೆ. ರೈಲು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ಹೆಚ್ಚು ಅನುಕೂಲಕರ ಪ್ರಯಾಣದ ಅನುಭವವನ್ನು ಒದಗಿಸುತ್ತದೆ.

    ಅ.25ರಂದು ಕೇರಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು 3,200 ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ನಗರದೊಂದಿಗೆ ತಡೆರಹಿತ ಸಂಪರ್ಕಕ್ಕಾಗಿ ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳ ಮೂಲಕ ಕೊಚ್ಚಿ ಸುತ್ತಮುತ್ತಲಿನ 10 ದ್ವೀಪಗಳನ್ನು ಸಂಪರ್ಕಿಸುವ ಕೊಚ್ಚಿ ವಾಟರ್ ಮೆಟ್ರೋವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.

    Post Views: 226

    Related Posts

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.