Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026
    Share

    ಉಳ್ಳಾಲ: ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್–ಸ್ಕೂಟರ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

    ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ ಗೋಪಾಲ ಮತ್ತು ವೇದಾವತಿ ದಂಪತಿಯ ಕಿರಿಯ ಪುತ್ರ ವರ್ಷಿತ್ ಕುಲಾಲ್ (21) ಮೆದುಳು ನಿಷ್ಕ್ರಿಯಗೊಂಡ ಯುವಕ.

    ವರ್ಷಿತ್ ಸೋಮವಾರ ರಾತ್ರಿ ಸುಮಾರು 7.30ರ ವೇಳೆಗೆ ಕುತ್ತಾರುವಿನಿಂದ ತನ್ನ ಮನೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಬಳಿಯ ದುರ್ಗಾ ಆಟೋ ವರ್ಕ್ಸ್ ಶಾಪ್ ಮುಂಭಾಗದಲ್ಲಿ ರಾಣಿಪುರದಿಂದ ಕುತ್ತಾರು ಕಡೆಗೆ ಬರುತ್ತಿದ್ದ ಸ್ಕೂಟರ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.

    ಅಪಘಾತದ ರಭಸಕ್ಕೆ ಬೈಕ್‌ನಿಂದ ರಸ್ತೆಗೆಸೆಯಲ್ಪಟ್ಟ ವರ್ಷಿತ್ ಅವರ ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

    ವೈದ್ಯರ ಸಲಹೆಯ ಮೇರೆಗೆ ವರ್ಷಿತ್ ಅವರ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ವಿವಿಧ ಆಸ್ಪತ್ರೆಗಳಿಂದ ಮೂತ್ರಪಿಂಡ, ಯಕೃತ್ತು, ಹೃದಯ ಹಾಗೂ ಶ್ವಾಸಕೋಶಗಳಿಗೆ ಬೇಡಿಕೆ ಬಂದಿದ್ದು, ಇಂದು ‘ಝೀರೋ ಟ್ರಾಫಿಕ್’ ವ್ಯವಸ್ಥೆಯ ಮೂಲಕ ಅಂಗಾಂಗಗಳನ್ನು ಸಂಬಂಧಪಟ್ಟ ಆಸ್ಪತ್ರೆಗಳಿಗೆ ರವಾನಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    ಅಪಘಾತದಲ್ಲಿ ಸ್ಕೂಟರ್ ಸವಾರ ಧೀರಜ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರ್ಷಿತ್ ಅವಿವಾಹಿತರಾಗಿದ್ದು, ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಂದೆ, ತಾಯಿ ಹಾಗೂ ಏಕೈಕ ಸಹೋದರನನ್ನು ಅಗಲಿದ್ದಾರೆ.

    ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 1

    Related Posts

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.