Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಈಜುಕೊಳದಲ್ಲಿ ಮೂವರು ಯುವತಿಯರ ದುರ್ಮರಣ – ವಾಝ್ಕೋ ಬೀಚ್ ರೆಸಾರ್ಟ್‌ಗೆ ಬೀಗ ಜಡಿದ ಅಧಿಕಾರಿಗಳು
    ಇತ್ತೀಚಿನ ಸುದ್ದಿ

    ಉಳ್ಳಾಲ: ಈಜುಕೊಳದಲ್ಲಿ ಮೂವರು ಯುವತಿಯರ ದುರ್ಮರಣ – ವಾಝ್ಕೋ ಬೀಚ್ ರೆಸಾರ್ಟ್‌ಗೆ ಬೀಗ ಜಡಿದ ಅಧಿಕಾರಿಗಳು

    November 17, 2024
    Share

    ಉಳ್ಳಾಲ: ಈಜುಕೊಳದಲ್ಲಿ ಉಸಿರುಗಟ್ಟಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‌‌ಗೆ ಅಧಿಕಾರಿಗಳು ಬೀಗಮುದ್ರೆ ಜಡಿದಿದ್ದಾರೆ. ಅಲ್ಲದೆ ಈ ರೆಸಾರ್ಟ್‌‌ನ ಟ್ರೇಡ್ ಲೈಸನ್ಸ್ ಹಾಗೂ ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ. ಏನಿದು ಪ್ರಕರಣ: ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್‌ ನಿವಾಸಿ ನಿಶಿತಾ ಎಂ.ಡಿ.(21), ಮೈಸೂರು ರಾಮಾನುಜ ರಸ್ತೆಯ ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್.(20), ಮೈಸೂರು ವಿಜಯನಗರ ದೇವರಾಜ ಮೊಹಲ್ಲಾ ನಿವಾಸಿ ಕೀರ್ತನಾ ಎನ್(21) ಎಂಬ ಮೂವರು ಶನಿವಾರ ಬೆಳಗ್ಗೆ ವಾಝ್ಕೋ ಬೀಚ್ ರೆಸಾರ್ಟ್‌ಗೆ ಬಂದು ತಂಗಿದ್ದರು. ರವಿವಾರ ಬೆಳಗ್ಗೆ 10ಗಂಟೆ ಸುಮಾರಿಗೆ ಮೂವರೂ ರೆಸಾರ್ಟ್ ಮುಂಭಾಗದಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಇಳಿದು ನೀರಾಟ ಆಡುತ್ತಿದ್ದರು‌. ಆದರೆ ಇವರಲ್ಲೊಬ್ಬಳು ಯುವತಿ ಈಜುಕೊಳದ ಮಧ್ಯದ ಆಳ ಇದ್ದ ಕಡೆ ಹೋಗಿ ಸಿಲುಕಿಕೊಂಡಿದ್ದಳು. ಆಕೆ ಒದ್ದಾಡುತ್ತಿರುವುದನ್ನು ಗಮನಿಸಿ ಮತ್ತಿಬ್ಬರು ರಕ್ಷಣೆಗೆ ಧಾವಿಸಿದ್ದರು. ಆದರೆ ಮೂವರಿಗೂ ಈಜು ಬಾರದ ಕಾರಣ ಈ ಸಾವು ಸಂಭವಿಸಿದೆ ಎನ್ನಲಾಗಿದೆ. ರೆಸಾರ್ಟ್ ಸಿಬ್ಬಂದಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

    Post Views: 248

    Related Posts

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.