Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ..!
    ಇತ್ತೀಚಿನ ಸುದ್ದಿ

    ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ..!

    June 1, 2025
    Share

    ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ.

    ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ.ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ ವೇಳೆ ಬಾಡಿ ವೋರ್ನ್‌ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಧರಿಸಿರಬೇಕು. ರಸ್ತೆಯಲ್ಲಿ ದಿಢೀರನೆ ಬಂದು ವಾಹನಗಳನ್ನು ಅಡ್ಡಗಟ್ಟುವುದಾಗಲಿ ಅಥವಾ ವಾಹನಗಳ ಕೀಲಿ ತೆಗೆದುಕೊಳ್ಳವುದಾಗಲಿ ಮಾಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಡಿಜಿಪಿ ವಾಹನ ತಪಾಸಣೆ ಸಲುವಾಗಿ ನೀಡಿದ ಮಾರ್ಗಸೂಚಿ ಇಂತಿದೆ:

    1.ಸಕಾರಣವಿಲ್ಲದೆ ದಾಖಲೆಗಳನ್ನು ಪರೀಕ್ಷಿಸಲು ವಾಹನಗಳನ್ನು ತಡೆದು ತಪಾಸಣೆಗೊಳಪಡಿಸಬಾರದು.

    ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆಗಳು ಕಂಡು ಬಂದಲ್ಲಿ ಮಾತ್ರ ವಾಹನ ತಡೆ ತಪಾಸಣೆ ನಡೆಸಬೇಕು. ಪ್ರಕರಣಗಳನ್ನು ದಾಖಲಿಸುವಾಗ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವುದು.

    (ಅ) ಹೆದ್ದಾರಿಗಳಲ್ಲಿ ಜಿಗ್‌ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ವಾಹನಗಳನ್ನು ತಡೆಯಬಾರದು. (ಆ) ರಸ್ತೆಯಲ್ಲಿ ದಿಢೀರನೆ ಅಡ್ಡ ಬಂದು ವಾಹನ ನಿಲ್ಲಿಸುವಂತೆ ಹೇಳಬಾರದು. (ಇ) ಬೈಕ್‌ನ ಹಿಂಬದಿ ಸವಾರನನ್ನು ಹಿಡಿದು ಎಳೆಯುವುದು ಹಾಗೂ ವಾಹನಗಳ ಕೀಲಿ ಕೈ ಕಿತ್ತುಕೊಳ್ಳಬಾರದು.

    ವೇಗವಾಗಿ ಚಲಾಯಿಸಿಕೊಂಡು ಬರುವ ವಾಹನ ಸವಾರರನ್ನು ಬೆನ್ನಟ್ಟಿ ಹಿಡಿಯಬಾರದು. ಆ ವಾಹನಗಳ ನೋಂದಣಿ ಸಂಖ್ಯೆಯನ್ನು ಆಧರಿಸಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಬೇಕು.

    ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸುವಾಗ ಅಥವಾ ವಾಹನಗಳ ತಪಾಸಣೆ ಮಾಡುವ ಸಂದರ್ಭದಲ್ಲಿ ತಮ್ಮ ಸುರಕ್ಷತೆಗೆ ರಿಫ್ಲೆಕ್ಟಿವ್‌ ಜಾಕೆಟ್‌ಗಳನ್ನು ಪೊಲೀಸರು ಧರಿಸಬೇಕು. ಸಂಜೆ ವೇಳೆ ಕಡ್ಡಾಯವಾಗಿ ಎಲ್‌ಇಡಿ ಬ್ಯಾಟನ್‌ಗಳನ್ನು ಉಪಯೋಗಿಸಬೇಕು ಹಾಗೂ ಕಡ್ಡಾಯವಾಗಿ ಬಾಡಿ ವೋರ್ನ್‌ ಕ್ಯಾಮೆರಾ ಧರಿಸಬೇಕು.

    ಸಂಚಾರ ನಿರ್ವಹಣಾ ಕೇಂದ್ರ ಅಥವಾ ಇಂಟೆಲಿಜೆಟ್‌ ಸಂಚಾರ ನಿರ್ವಹಣಾ ವ್ಯವಸ್ಥೆ (ಐಟಿಎಂಎಸ್‌) ಘಟಕ ಸಂಪರ್ಕ ರಹಿತ ಪ್ರವರ್ತನಾ ಮೂಲಕ ಪ್ರಕರಣಗಳನ್ನು ದಾಖಲಿಸಬೇಕು.

    ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಕುರಿತು ಜನ ಜಾಗೃತಿ ಅಭಿಯಾನ ನಡೆಸಬೇಕು.

    ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಸೇರಿ ಇತರ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು. ಇಂತಹ ವಾಹನಗಳ ವಿರುದ್ಧ ಎಸ್‌ಟಿವಿಆರ್ ದಾಖಲಿಸಲು ತಂತ್ರಜ್ಞಾನ ಆಧಾರಿತ ನಿಯಮಗಳನ್ನು ಅನುಸರಿಬೇಕು.

    ವಾಹನಗಳ ವೇಗವನ್ನು ಇಳಿಸುವ ಸಲುವಾಗಿ ತಪಾಸಣೆಯ ಸ್ಥಳದ ಸುಮಾರು 100-150 ಮೀಟರ್ ಮೊದಲೇ ರಿಫ್ಲೆಕ್ಟಿವ್‌ ರಬ್ಬರ್ ಕೋನ್‌ಗಳನ್ನು ಹಾಗೂ ಸುರಕ್ಷತಾ ಸಲಕರಣೆಗಳನ್ನು ಅಳವಡಿಸುವುದು.

    ರಾತ್ರಿ ಮತ್ತು ತಡರಾತ್ರಿ ವೇಳೆ ಸಂಚಾರ ಸಿಗ್ನಲ್ ದೀಪಗಳಿರುವ/ಜಂಕ್ಷನ್‌ಗಳ ಬದಿಯಲ್ಲೇ ವಾಹನಗಳನ್ನು ತಪಾಸಣೆ ಮಾಡುವುದು ಸೂಕ್ತ.

    ನಾಕಾಬಂಧಿಗಳನ್ನು ಹೆದ್ದಾರಿಗಳಲ್ಲಿ ನಡೆಸಬಾರದು. ತಪಾಸಣೆ ಸಂದರ್ಭದಲ್ಲಿ ಸುರಕ್ಷತಾ ಹಿತದೃಷ್ಟಿಯಿಂದ ಸಂಚಾರ ಪೊಲೀಸರ ಸಹಕಾರವನ್ನು ಪಡೆಯಬೇಕು.

    Post Views: 281

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.