Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯ ಬಂಧನ

    December 6, 2025
    Share

    ಮಂಗಳೂರು: ದಿನಾಂಕ: 21-11-2025 ರಂದು ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ದ ಮಹಿಳೆಯು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ಅಪರಿತ ವ್ಯಕ್ತಿಯು ದ್ವಿಚಕ್ರ ವಾಹನದಲ್ಲಿ ಬಂದು ಚಿನ್ನದ ಸರವನ್ನು ಕಸಿದುಕೊಂಡು ಹೋದ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

    ಈ ಪ್ರಕರಣದ ಆರೋಪಿ ಪತ್ತೆ ಬಗ್ಗೆ ಕದ್ರಿ ಠಾಣೆಯಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ದಿನಾಂಕ: 04-12-2025 ರಂದು ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಸಾಣೆ ನಡೆಸುತ್ತಿದ್ದ ಸಮಯ ಸಂಶಯಾಸ್ಪದವಾಗಿ ದ್ವಿಚಕ್ರ ವಾಹನ ಸಂಖ್ಯೆ KA19HC6946 ಚಲಾಯಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ ಪರಿಶೀಲಿಸಿದಾಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವಾಗಿದ್ದು, ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿ ಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದ ಬೆಳಕಿಗೆ ಬಂದಿರುತ್ತದೆ.

    1. ದಿನಾಂಕ: 21-11-2025 ರಂದು ಕದ್ರಿ ಬಟ್ಟಗುಡ್ಡೆ ಬಳಿ ವಯೋವೃದ್ದ ಮಹಿಳೆಯ 1.5 ಪವನ್ ಸರವನ್ನು ಸುಲಿಗೆ ಮಾಡಿದ ಪ್ರಕರಣ.
    2. ದಿನಾಂಕ: 27-09-2025 ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಕೋಟೆಕೇರಿ ಬಳಿ ಒಂಟಿ ಮಹಿಳೆಗೆ ಚೂರಿ ತೋರಿಸಿ ಬೆದರಿಸಿ 2 ಪವನ್ ಚಿನ್ನದ ಸರವನ್ನು ಸುಲಿಗೆ ಪ್ರಕರಣ.
    3. ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.
    4. ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.
    5. ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ
    6. ಸುರತ್ಕಲ್ ಠಾಣಾ ವ್ಯಾಪ್ತಿಯ ಅಗರಮೇಲು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ.
      ಈ ಮೇಲಿನ ಎಲ್ಲಾ ಪ್ರಕರಣಗಳು ಒಟ್ಟು ಸೇರಿ ಆರೋಪಿಯಿಂದ ರೂ. 1,50,000/- ಮೌಲ್ಯದ 4 ದ್ವಿ ಚಕ್ರ ವಾಹನ ಮತ್ತು ರೂ. 3.5 ಲಕ್ಷ ಮೌಲ್ಯದ ಚಿನ್ನಾಭರಣ ಸಮೇತ ಒಟ್ಟು 6 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.ಆರೋಪಿಯನ್ನು ಮಾನ್ಯ n ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಯನ್ನು 3 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿರುತ್ತದೆ. ಆರೋಪಿಯ ವಿವರ:

    ಆದಿತ್ ಗೋಪಾನ್ @ ಮುತ್ತು ಕೃಷ್ಣ, ಪ್ರಾಯ: 32, ತಂದೆ: ಗೋಪಾನ್ ನಾಯರ್ ವಾಸ: ವೆಲ್ಲಟ್ಟಿ ವೀಡು,ವಲಿಯರ್ತಲ, ತಿರುವನಂತಪುರಂ, ಕೇರಳ ರಾಜ್ಯದವನಾಗಿದ್ದು, ಈತನ ಮೇಲೆ ಈಗಾಗಲೇ ತಮಿಳುನಾಡು ರಾಜ್ಯದಲ್ಲಿ ಮನೆಗಳಿಗೆ ಹೊಂಚು ಹಾಕಿ 4 ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಾಗಿದ್ದು, ನಾಗರಕೋಯಿಲ್ ಜೈಲಿನಲ್ಲಿ ಸೆರೆವಾಸವನ್ನು ಅನುಭವಿಸಿ ಬಿಡುಗಡೆಗೊಂಡಿರುವ ಆಸಾಮಿಯಾಗಿರುತ್ತಾನೆ. ಈತನು ಅಂತರ್ ರಾಜ್ಯ ಕುಖ್ಯಾತ ಕಳ್ಳನಾಗಿದ್ದು, ಜೈಲಿನಿಂದ ಬಿಡುಗಡೆಯಾದ ನಂತರ ರೈಲಿನಲ್ಲಿ ಭಾರತ ದೇಶದ ಎಲ್ಲಾ ಕಡೆ ಸುತ್ತಾಡಿಕೊಂಡು ರೈಲ್ವೇ ನಿಲ್ದಾಣದ ಬಳಿ ಆಸು ಪಾಸಿನಲ್ಲಿ ಇರುವ ದ್ವಿ ಚಕ್ರವಾಹನ ಕಳ್ಳತನ ಮಾಡಿ ಸುಲಿಗೆ ಮಾಡುತ್ತಿದ್ದನು. ನಂತರ ರೈಲಿನಲ್ಲಿ ವಿವಿಧ ಕಡೆ ಪ್ರಯಾಣ ಮಾಡಿ ತಲೆಮರೆಸಿಕೊಳ್ಳುತ್ತಿದ್ದನು. ಈತನ ಪತ್ತೆಗೆ ಪೊಲೀಸರ ವಿಶೇಷ ಪ್ರಯತ್ನದಿಂದ ಪ್ರಕರಣವು ಅತೀ ಶೀಘ್ರದಲ್ಲಿ ಪತ್ತೆಯಾಗಿರುತ್ತದೆ.
    ಈ ಪ್ರಕರಣದ ಪತ್ತೆಯ ಬಗ್ಗೆ ಶ್ರೀ ಪ್ರತಾಪ್ ಸಿಂಗ್ ತೋರಟ್, ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗರವರ ನಿರ್ದೇಶನದಂತೆ, ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮಾನಾಭ ರವರ ನೇತೃತ್ವದಲ್ಲಿ ಪಿಎಸ್ಐಗಳಾದ ಮನೋಹರ್ ಪ್ರಸಾದ್, ಶ್ರೀಮತಿ ಜ್ಯೊತಿ ಮತ್ತು ಕದ್ರಿ ಅಪರಾಧ ಪತ್ತೆ ವಿಭಾಗದ ಎ.ಎಸ್.ಐ. ಚಂದ್ರಶೇಖರ್, ಹೆಚ್.ಸಿಗಳಾದ ಸಂತೋಷ್ ಡಿ.ಕೆ, ಸುರೇಶ್, ಪಿ.ಸಿಗಳಾದ ಸುನೀಲ್, ಮಣಿಕಂಠ, ವಿನ್ಸೆಂಟ್ ಕುರುವಿಲ್ಲಾ ಮತ್ತು ಮಪಿಸಿ ಜಕ್ಕವ್ವ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಈ ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.
    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಠಾಣೆಗಳಲ್ಲಿ 2025 ನೇ ಸಾಲಿನಲ್ಲಿ ಈವರೆಗೆ ಒಟ್ಟು 72 ದ್ವಿ ಚಕ್ರ ವಾಹನಗಳು ಕಳವಾಗಿದ್ದು ಇದರ ಪೈಕಿ ಕಳವಾದ 57 ದ್ವಿ ಚಕ್ರವಾಹನಗಳನ್ನು ಪತ್ತೆ ಮಾಡಲಾಗಿದ್ದು, 15 ಚಕ್ರವಾಹನಗಳು ಮಾತ್ರ ಪತ್ತೆಗೆ ಬಾಕಿ ಇದೆ. ಮಂಗಳೂರು ನಗರದಲ್ಲಿ ಒಟ್ಟು 79% ರಷ್ಟು ಕಳವಾದ ದ್ವಿ ಚಕ್ರವಾಹನಗನ್ನು ಪತ್ತೆ ಹಚ್ಚಲಾಗಿದೆ.

    Post Views: 149

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.