ಮಂಗಳೂರು: ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಗೆ ಗುರುವಾರ ಮುತ್ತಿಗೆ ಹಾಕಲಾಯಿತು.
ನೂರಾರು ಸಂಖ್ಯೆಯಲ್ಲಿ ಆಗಮಿಸಿದ ವ್ಯಾಪಾಸ್ಥರು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿದರು.
ಬೀದಿ ಬದಿ ವ್ಯಾಪಾರದ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡಿರುವ ಐಡಿ ಮುದ್ರಣಗೊಂಡಿದ್ದರೂ ವ್ಯಾಪಾರಸ್ಥರಿಗೆ ದೊರಕದೆ ಇರುವುದರಿಂದ ಬಿಡಿ ಬದಿ ವ್ಯಾಪಾರಸ್ಥರು ಆಕ್ರೋಶಗೊಂಡಿದ್ದಾರೆ.
ಈ ವೇಳೆ ಮಾತನಾಡಿದ ಆಯುಕ್ತ ಆನಂದ್ ಸಿಎಲ್, ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಐಡಿ ಕಾರ್ಡ್ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ
ಒಂದು ವೇಳೆ ಐಡಿ ಕಾರ್ಡ್ ವಿತರಿಸದಿದ್ದರೆ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬರುವ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಹೋರಾಟಗಾರ ಬಿ.ಕೆ.ಇಮ್ತಿಯಾಜ್ ಎಚ್ಚರಿಕೆ ನೀಡಿದ್ದಾರೆ.