Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವೆಂಕಟೇಶ ನಾಯಕ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿ ಪ್ರದಾನ
    ಇತ್ತೀಚಿನ ಸುದ್ದಿ

    ಮಂಗಳೂರು: ವೆಂಕಟೇಶ ನಾಯಕ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿ ಪ್ರದಾನ

    February 7, 2026
    Share

    ಮಂಗಳೂರು: ವಿಶ್ವವಿದ್ಯಾನಿಲಯವು ಅರ್ಥಶಾಸ್ತ್ರ ವಿಭಾಗದಲ್ಲಿ ನಡೆಸಿದ ಸಂಶೋಧನೆಗಾಗಿ ವೆಂಕಟೇಶ ನಾಯಕ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿಯನ್ನು ಪ್ರದಾನ ಮಾಡಿದೆ.

    ವೆಂಕಟೇಶ ನಾಯಕ್ ಅವರು “ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ – ಒಂದು ಪ್ರಕರಣ ಅಧ್ಯಯನ” ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರೌಢ ಪ್ರಬಂಧವನ್ನು ಸಲ್ಲಿಸಿದ್ದರು. ಈ ಅಧ್ಯಯನವು ವಿಶೇಷವಾಗಿ ಅತೀ ಅಸುರಕ್ಷಿತ ಜನಾಂಗ (PVTG) ಆಗಿರುವ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ ಕಾರ್ಯಕ್ರಮಗಳ ವ್ಯಾಪ್ತಿ, ಸವಾಲುಗಳು ಹಾಗೂ ಪರಿಣಾಮಗಳನ್ನು ವಿಶ್ಲೇಷಿಸಿ, ಸಮಾವೇಶಿತ ಅಭಿವೃದ್ಧಿಗೆ ಸಂಬಂಧಿಸಿದ ನೀತಿಪೂರಕ ಫಲಿತಗಳನ್ನು ನೀಡಿದೆ.

    ಈ ಸಂಶೋಧನೆಯನ್ನು ಡಾ . ಜಯವಂತ ನಾಯಕ್, ಪ್ರಾಧ್ಯಾಪಕರು, ಅರ್ಥಶಾಸ್ತ್ರ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರು ಮಾರ್ಗದರ್ಶಕರಾಗಿದ್ದರು. ಪ್ರಬಂಧವನ್ನು ಬಾಹ್ಯ ಪರೀಕ್ಷಕರಾಗಿ ಡಾ ಎಸ್ ಎನ್ ಯೋಗೀಶ್, ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರು, ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ವಿಭಾಗ, ಕುವೆಂಪು ವಿಶ್ವವಿದ್ಯಾಲಯ ಮತ್ತು ತಮಿಳುನಾಡಿನ ಗಾಂಧಿಗ್ರಾಮ ರೂರಲ್ ಇನ್ಸ್ಟಿಟ್ಯೂಟ್ ನ ಹಿರಿಯ ಪ್ರಾಧ್ಯಾಪಕರು ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರಾಜೇಂದ್ರನ್ ಅವರು ಮೌಲ್ಯಮಾಪನ ನಡೆಸಿ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಮೌಖಿಕ ಪರೀಕ್ಷೆ ನಡೆಯಿತು.

    ಯಶಸ್ವಿ ಮೌಖಿಕ ಪರೀಕ್ಷೆಯ ನಂತರ ಪದವಿ ಪ್ರದಾನದ ಘೋಷಣೆ ಡಾ. ಜಗದೀಶ್ ಟಿ. ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರು, ಅರ್ಥಶಾಸ್ತ್ರ ವಿಭಾಗ, ಮಂಗಳೂರು ವಿಶ್ವವಿದ್ಯಾಲಯ ಅವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಡಾ. ಮುನಿರಾಜು ವೈ ಪ್ರಾಧ್ಯಾಪಕರು ಹಾಗೂ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮಾಜಿ ಡೀನ್, ಮಂಗಳೂರು ವಿಶ್ವವಿದ್ಯಾಲಯ; ಡಾ. ರಾಮಕೃಷ್ಣ ಬಿ ಎಂ, ಪ್ರಾಧ್ಯಾಪಕರು ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು; ಡಾ ಸುಭಾಷಿಣಿ ಶ್ರೀವತ್ಸ, ಪ್ರಾಧ್ಯಾಪಕರು; ಡಾ ಜಗದೀಶ್, ವಾಣಿಜ್ಯ ವಿಭಾಗದ ಪ್ರಾಧ್ಯಾಪಕರು; ಡಾ. ಮಾಧವ, ಸಹ ಪ್ರಾಧ್ಯಾಪಕರು, ಕನ್ನಡ ವಿಭಾಗ; ಉಪನ್ಯಾಸಕರಾದ ರಾಜೇಶ್ ಕುಮಾರ್ ಸೇರಿದಂತೆ ಇತರ ಬೋಧಕ ಸಿಬ್ಬಂದಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ವೆಂಕಟೇಶ ನಾಯಕ್ ಅವರು ಶ್ರೀ ಗೋಪಾಲಕೃಷ್ಣ ನಾಯಕ್ ಮತ್ತು ದಿವಂಗತ ಶ್ರೀಮತಿ ಜ್ಯೋತಿ ನಾಯಕ್ ಅವರ ಪುತ್ರರು. ಅವರ ಪತ್ನಿ ಕಾವ್ಯ ಪಿ ಹೆಗ್ಡೆ, ಸಹಾಯಕ ಪ್ರಾಧ್ಯಾಪಕರು, ವಾಣಿಜ್ಯ ಮತ್ತು ಅಂತರರಾಷ್ಟ್ರೀಯ ಅಧ್ಯಯನ ವಿಭಾಗ, ಕೇಂದ್ರೀಯ ವಿಶ್ವವಿದ್ಯಾಲಯ ಕೇರಳ, ಕಾಸರಗೋಡು ಅವರು ಕೂಡ ಉಪಸ್ಥಿತರಿದ್ದರು.

    ಈ ಸಂಶೋಧನೆ ಕರ್ನಾಟಕದ ಬುಡಕಟ್ಟು ಸಮುದಾಯಗಳ ಹಣಕಾಸು ಒಳಗೊಳ್ಳುವಿಕೆ ಕುರಿತು ಶೈಕ್ಷಣಿಕ ವಲಯ ಹಾಗೂ ನೀತಿ ರೂಪಿಸುವ ಚರ್ಚೆಗಳಿಗೆ ಮಹತ್ವದ ಕೊಡುಗೆ ನೀಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.

    Post Views: 164

    Related Posts

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.