Facebook Twitter Instagram
    Monday, October 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    Share

    ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಯುವತಿಯ ಬಳಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವೃದ್ಧನನ್ನು ವೇಣೂರು ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ವಶಕ್ಕೆ ಪಡೆಯಲಾದ ಆರೋಪಿ.

    ಸಂತ್ರಸ್ತ ಯುವತಿಯು ಅಕ್ಟೋಬರ್ 24, 2026ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾಗ, ಅಲ್ಲಿಗೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಸೈಯ್ಯದ್ ಮಹಮ್ಮದ್ ಇಸಾಕ್, ಸಾರ್ವಜನಿಕ ಸ್ಥಳದಲ್ಲೇ ಯುವತಿಯೊಂದಿಗೆ ಅತ್ಯಂತ ಅಸಭ್ಯವಾಗಿ ಮಾತನಾಡಿದ್ದಾನೆ. ಅಷ್ಟೇ ಅಲ್ಲದೆ, ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಸಂತ್ರಸ್ತ ಯುವತಿ ನೀಡಿದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 25ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿದೆ.

    ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS 2023)ಯ ಸೆಕ್ಷನ್ 75(1)(ii), 75(1)(iv) (ಲೈಂಗಿಕ ಕಿರುಕುಳ), ಸೆಕ್ಷನ್ 79 (ಮಹಿಳೆಯ ಘನತೆಗೆ ಧಕ್ಕೆ ತರುವುದು) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ 2015ರ ಸೆಕ್ಷನ್ 3(1)(r), 3(1)(w)(ii) ಮತ್ತು 3(2)(va) ಅಡಿಯಲ್ಲಿ (ಅಪರಾಧ ಕ್ರಮಾಂಕ 73/2026) ಗಂಭೀರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
    ಸದ್ರಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

    Post Views: 1

    Related Posts

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ

    October 26, 2026

    ಮಂಗಳೂರು: ದ್ವಿಚಕ್ರ ವಾಹನಗಳ ಕಳವು- 9 ದ್ವಿಚಕ್ರ ವಾಹನಗಳ ವಶಕ್ಕೆ

    October 25, 2026

    ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ  ಹೆಸರಿನಲ್ಲಿ ₹1.71 ಲಕ್ಷ ಸೈಬರ್ ವಂಚನೆ

    October 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ

    October 26, 2026

    ಮಂಗಳೂರು: ದ್ವಿಚಕ್ರ ವಾಹನಗಳ ಕಳವು- 9 ದ್ವಿಚಕ್ರ ವಾಹನಗಳ ವಶಕ್ಕೆ

    October 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.