Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿರಿಯ ನಟ ಎಂ.ಎಸ್. ಉಮೇಶ್ ಇನ್ನಿಲ್ಲ..!
    ಇತ್ತೀಚಿನ ಸುದ್ದಿ

    ಹಿರಿಯ ನಟ ಎಂ.ಎಸ್. ಉಮೇಶ್ ಇನ್ನಿಲ್ಲ..!

    November 30, 2025
    Share

    ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದರು.

    ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ.

    ತನ್ನ ವಿಶಿಷ್ಟವಾದ ಸ್ವರ, ಮ್ಯಾನರಿಸಂ ಮತ್ತು ನಟನೆಯಿಂದ ಉಮೇಶ್‌ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು. 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅವರು ಬಹುತೇಕ ಎಲ್ಲ ನಾಯಕ ನಟರ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಿಗೆ ಜೀವ ತುಂಬಿದ್ದರು.

    ಇತ್ತೀಚೆಗೆ ಉಮೇಶ್ ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸಿದ್ದ ವೈದ್ಯರು ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಹಾಗೂ ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಈಗ ಉಮೇಶ್ ನಿಧನರಾಗಿರುವುದು ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.

    Post Views: 101

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.