Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಮೋದಿ ಪದಗ್ರಹಣ ವಿಜಯೋತ್ಸವದ ಬಳಿಕ ತಂಡವೊಂದು ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ
    ಇತ್ತೀಚಿನ ಸುದ್ದಿ

    ಮಂಗಳೂರು : ಮೋದಿ ಪದಗ್ರಹಣ ವಿಜಯೋತ್ಸವದ ಬಳಿಕ ತಂಡವೊಂದು ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ

    June 10, 2024
    Share

    ಮಂಗಳೂರು : ಪ್ರಧಾನಿ ಮೋದಿಯವರ ಪದಗ್ರಹಣದ ಹಿನ್ನಲೆಯಲ್ಲಿ ನಡೆದ ವಿಜಯೋತ್ಸವದ ಬಳಿಕ 20-25 ಮಂದಿಯ ತಂಡವೊಂದು ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ರವಿವಾರ ರಾತ್ರಿ ಚೂರಿ ಇರಿದ ಘಟನೆ ಮಂಗಳೂರು ನಗರದ ಮುಡಿಪು ಸಮೀಪದ ಬೋಳಿಯಾರು ಎಂಬಲ್ಲಿ ನಡೆದಿದೆ. ಇನ್ನೋಳಿ ನಿವಾಸಿಗಳಾದ ಹರೀಶ್ (41) ಹಾಗೂ ನಂದಕುಮಾರ್ (24 ವರ್ಷ) ಚೂರಿ ಇರಿತಕ್ಕೆ ಒಳಗಾದವರು. ಇನ್ನೋಳಿ‌ ನಿವಾಸಿ ಕೃಷ್ಣ ಕುಮಾರ್ ಎಂಬವರು ಹಲ್ಲೆಗೊಳಗಾಗಿದ್ದಾರೆ. ನಿನ್ನೆ ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿ ಪದಗ್ರಹಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೋಳಿಯಾರುವಿನಲ್ಲಿ ವಿಜಯೋತ್ಸವ ನಡೆದಿತ್ತು. ಈ ವೇಳೆ ಮೂವರು ಬಿಜೆಪಿ ಕಾರ್ಯಕರ್ತರು ಬೊಳಿಯಾರು ಮಸೀದಿಯ ಮುಂಭಾಗ ಘೋಷಣೆಗಳನ್ನು ಕೂಗಿದ್ದರು ಎನ್ನಲಾಗಿದೆ. ವಿಜಯೋತ್ಸವದ ಬಳಿಕ ಕೆಲ ಬೈಕ್‌ಗಳಲ್ಲಿ 20-25 ಅನ್ಯಕೋಮಿನ ಯುವಕರ ತಂಡ ಅವರನ್ನು ಹಿಂಬಾಲಿಸಿದೆ. ಈ ವೇಳೆ ಎರಡೂ ತಂಡಗಳ ನಡುವೆ ವಾಗ್ವಾದ ನಡೆದಿದೆ. ಅಲ್ಲಿ ಅನ್ಯಕೋಮಿನ ಯುವಕರ ತಂಡ ಮೂವರನ್ನು ಥಳಿಸಿ, ಇಬ್ಬರಿಗೆ ಚೂರಿಯಿಂದ ಇರಿದಿದೆ. ಇವರಲ್ಲಿ ಒಬ್ಬರು ಅಪಾಯದಿಂದ ಪಾರಾಗಿದ್ದು, ಮತ್ತೊಬ್ಬರು ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 223

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.